ಕಣ್ಣೀರು ಹಾಕಿಕೊಂಡು ಕೆಲಸ ಮಾಡುವ ಸ್ಥಿತಿ ಕನ್ನಡಿಗರದು !

7

ಕಣ್ಣೀರು ಹಾಕಿಕೊಂಡು ಕೆಲಸ ಮಾಡುವ ಸ್ಥಿತಿ ಕನ್ನಡಿಗರದು !

Published:
Updated:
ಕಣ್ಣೀರು ಹಾಕಿಕೊಂಡು ಕೆಲಸ ಮಾಡುವ ಸ್ಥಿತಿ ಕನ್ನಡಿಗರದು !

ಬೆಂಗಳೂರು: ‘ನಮ್ಮ ಮೆಟ್ರೊದಲ್ಲಿ ಕೆಲಸ ಮಾಡುವ ಕನ್ನಡಿಗರಿಗೆ ಕಿರುಕುಳ ನೀಡಲಾಗುತ್ತಿದೆ. ನಿತ್ಯವೂ ಕಣ್ಣೀರು ಹಾಕಿಕೊಂಡು ಕೆಲಸ ಮಾಡುವ ಸ್ಥಿತಿ ಇದೆ’ ಎಂದು ಜೆಡಿಎಸ್‌ನ ಆರ್‌.ಚೌಡರೆಡ್ಡಿ ತೂಪಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿ, ಬೆಂಗಳೂರು ಮೆಟ್ರೊ ರೈಲು ನಿಗಮದಲ್ಲಿ ಕನ್ನಡಿಗ ಉದ್ಯೋಗಿಗಳಿಗೆ ಕಿರುಕುಳ ನೀಡುತ್ತಿರುವ ಅನ್ಯ ರಾಜ್ಯಗಳ ಅಧಿಕಾರಿಗಳನ್ನು ತೆಗೆದು ಹಾಕಬೇಕು. ಆ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು ಎಂದರು.

‘ಮೆಟ್ರೊ ರೈಲು ನಿಗಮ ನೇರ ನಮ್ಮ ಅಧೀನಕ್ಕೆ ಬರುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರ ಶೇ 50 ರಷ್ಟು ಹಣ ಹೂಡಿಕೆ ಮಾಡಿವೆ. ಸ್ವಾಯತ್ತ ನಿಗಮವಾಗಿರುವುದರಿಂದ ದೈನಂದಿನ ವಿಚಾರಗಳಲ್ಲಿ ನಾವು ತಲೆ ಹಾಕಲು ಸಾಧ್ಯವಿಲ್ಲ. ಆದರೆ, ಕನ್ನಡಿಗರಿಗೆ ಆದ್ಯತೆ ನೀಡುವಂತೆ ಹೊಸ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸುತ್ತೇನೆ’ ಎಂದು ಜಾರ್ಜ್ ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry