ಗುರುವಾರ , ಮೇ 28, 2020
27 °C

ಮೀಸಲಾತಿಗಿಂತ ಮತದಾನದ ಶಕ್ತಿ ದೊಡ್ಡದು: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೀಸಲಾತಿಗಿಂತ ಮತದಾನದ ಶಕ್ತಿ ದೊಡ್ಡದು: ಕುಮಾರಸ್ವಾಮಿ

ಮಂಡ್ಯ: ‘ಮೀಸಲಾತಿ ಸೌಲಭ್ಯ ಕಲ್ಪಿಸಿ 70 ವರ್ಷಗಳಾಗಿದ್ದರೂ ಸಾಮಾನ್ಯ ಜನರ ಪರಿಸ್ಥಿತಿ ಬದಲಾಗಿಲ್ಲ. ಮೀಸಲಾತಿಗಿಂತಲೂ ಮತದಾನದ ಹಕ್ಕು ಬಲು ದೊಡ್ಡ ಶಕ್ತಿಯಾಗಿದೆ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಹಿಂದುಳಿದ ವರ್ಗ ಗಳ ಘಟಕ ಗುರುವಾರ ಆಯೋಜಿಸಿದ್ದ ಮಡಿವಾಳರ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.

‘ಮೀಸಲಾತಿ ವ್ಯವಸ್ಥೆ ದಲಿತರು, ಹಿಂದುಳಿದವರ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಸ್ಥಿತಿಯನ್ನು ಎಷ್ಟರ ಮಟ್ಟಿಗೆ ಸುಧಾರಿಸಿದೆ ಎಂಬ ಪ್ರಶ್ನೆ ಕಾಡುತ್ತಿದೆ. ಮೀಸಲಾತಿಯಿಂದ ಒಂದು ಹೆಜ್ಜೆ ಮುಂದೆ ಹೋಗಿ ಚಿಂತಿಸಬೇಕಾಗಿದೆ. ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಮೀಸಲಾತಿ ಮಾತ್ರ

ವಲ್ಲದೆ ಮತದಾನದ ಹಕ್ಕನ್ನೂ ಕೊಟ್ಟಿದ್ದಾರೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಅಶಕ್ತ ಜನರು ತಮ್ಮ ಹಕ್ಕು ಪಡೆಯಬಹುದಾಗಿದೆ’ ಎಂದರು.

‘ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂಬುದು ಬಹುಕಾಲದ ಬೇಡಿಕೆಯಾಗಿದೆ. ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಈ ಬೇಡಿಕೆಯನ್ನು ಈಡೇರಿಸಲಾಗುವುದು’ ಎಂದು ಹೇಳಿದರು.

ಬೇರೆ ಪಕ್ಷಗಳ ಸಹವಾಸ ಬೇಡ: ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮಾತನಾಡಿ, ‘ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದರೆ ಮುಂಬರುವ ಚುನಾವಣೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಬೇರೆ ಪಕ್ಷಗಳ ಸಹವಾಸ ಮಾಡಬಾರದು. ಮತ್ಯಾರದ್ದೋ ಸಹಾಯ ಪಡೆದು ಸರ್ಕಾರ ರಚಿಸಿದರೆ ಸ್ವತಂತ್ರವಾಗಿ ಜನರ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯಬೇಕು. ಪಕ್ಷಕ್ಕೆ ಬಹುಮತ ಬಂದರೆ ಮಡಿವಾಳರ ಎಲ್ಲಾ ಬೇಡಿಕೆಗಳು ಈಡೇರುತ್ತವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.