ಗುರುವಾರ , ಜೂನ್ 4, 2020
27 °C

ಕರಾವಳಿಗೆ 18ಕ್ಕೆ ಅಮಿತ್‌ ಶಾ: ಪ್ರಚಾರಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರಾವಳಿಗೆ 18ಕ್ಕೆ ಅಮಿತ್‌ ಶಾ: ಪ್ರಚಾರಕ್ಕೆ ಚಾಲನೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಮುಂದಾಗಿದ್ದಾರೆ. ಮೂರು ದಿನ ಬಿಡುವಿಲ್ಲದ ಕಾರ್ಯ

ಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದು, ಈ ಮೂಲಕ ಕರಾವಳಿಯಿಂದಲೇ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

18ರಿಂದ 20ರವರೆಗೆ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಪ್ರವಾಸ ಮಾಡಲಿರುವ ಶಾ, ಶಕ್ತಿ ಕೇಂದ್ರಗಳ ಮುಖ್ಯಸ್ಥರು, ಹಿರಿಯ ಮುಖಂಡರು, ಮೀನುಗಾರಿಕೆ ಪ್ರಕೋಷ್ಠದ ನಾಯಕರ ಜತೆ ಸಭೆ ನಡೆಸಲಿದ್ದಾರೆ.

ಜತೆಗೆ, ಕಾಟಿಪಳ್ಳದಲ್ಲಿ ಹತ್ಯೆಯಾದ ದೀಪಕ್‌ ರಾವ್ ಮತ್ತು ಹೊನ್ನಾವರದ ಪರೇಶ್‌ ಮೇಸ್ತ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಕಸರತ್ತು: ಅಮಿತ್‌ ಶಾ ಪ್ರವಾಸದ ಸಂದರ್ಭದಲ್ಲಿಯೇ ಕರಾವಳಿ ಭಾಗದ 19 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಸರತ್ತು ಆರಂಭವಾಗುವ ನಿರೀಕ್ಷೆ ಇದೆ.

ದೇವಾಲಯಗಳ ಭೇಟಿ: ಶಾ ಅವರು ಕುಕ್ಕೆ ಸುಬ್ರಹ್ಮಣ್ಯ, ಉಡುಪಿ ಶ್ರೀಕೃಷ್ಣ ಮಠ ಸೇರಿದಂತೆ ವಿವಿಧ ದೇವಾಲಯಗಳಿಗೂ ಭೇಟಿ ನೀಡಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.