ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆ ಉಳಿಸಲು ಆಗ್ರಹಿಸಿ ಪ್ರತಿಭಟನೆ

Last Updated 9 ಫೆಬ್ರುವರಿ 2018, 8:56 IST
ಅಕ್ಷರ ಗಾತ್ರ

ಕಾರಟಗಿ: ಪಟ್ಟಣದಲ್ಲಿರುವ ಹಕ್ಕ ಬುಕ್ಕರ ಕಾಲದ ಐತಿಹಾಸಿಕ ಕೆರೆಯನ್ನು ಉಳಿಸಬೇಕು ಎಂದು ಆಗ್ರಹಿಸಿ ಪರಿಸರ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ವಿಶೇಷ ಎಪಿಎಂಸಿ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ರಾಜ್ಯ ಹೆದ್ದಾರಿ, ಹಳೆಯ ಬಸ್‌ ನಿಲ್ದಾಣ ಮಾರ್ಗವಾಗಿ ಕನಕದಾಸ ವೃತ್ತಕ್ಕೆ ತಲುಪಿತು.

ಅಂತರ್ಜಲ ಹೆಚ್ಚಳಕ್ಕೆ ಕೆರೆ ಸಂರಕ್ಷಣೆ ಅಗತ್ಯ. ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡ ನಿರ್ಮಿಸಲು ಕೆರೆ ಬಳಕೆ ಮಾಡುವುದನ್ನು ಬಿಡಬೇಕು. ಕೆರೆ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕನಕದಾಸ ವೃತ್ತದಲ್ಲಿ ನಡೆದ ಸಭೆಯಲ್ಲಿ ನೇತೃತ್ವ ವಹಿಸಿದ್ದ ಹಿರೇಮಠದ ಮರುಳಸಿದ್ದಯ್ಯಸ್ವಾಮಿ, ರೈತ ಮುಖಂಡರಾದ ಮರಿಯಪ್ಪ ಸಾಲೋಣಿ, ಜೆ. ರಾಮರಾವ್ ಮಾತನಾಡಿ, ಕೆರೆ ಉಳಿಸಿ, ಅಂತರ್ಜಲ ಹೆಚ್ಚಿಸಬೇಕು. ಜನರ ಮನವಿಗೆ ಜನಪ್ರತಿನಿಧಿಗಳು ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪಟ್ಟಣದ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿ ಪ್ರತಿಭಟನೆಗೆ ಬೆಂಬಲ ನೀಡಿದರು. ಹೀಗಾಗಿ ಪಟ್ಟಣದಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನೆ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಆಯಿತು. ಹೀಗಾಗಿ ಕೆಲವು ವಾಹನಗಳನ್ನು ಪರ್ಯಾಯ ಮಾರ್ಗವಾಗಿ ಸಂಚರಿಸಿದವು.

ವಿಶೇಷ ಎಪಿಎಂಸಿ ಸದಸ್ಯ ನಾಗರಾಜ ಅರಳಿ, ಪುರಸಭೆ ಸದಸ್ಯರಾದ ಸಿದ್ರಾಮಯ್ಯಸ್ವಾಮಿ ಹಿರೇಮಠ, ಕೆ. ಎಚ್. ಸಂಗನಗೌಡ, ಯುಸೂಫ್, ಡಿ. ಹೊಳೆಯಪ್ಪ ಮತ್ತು ವೀರಶೈವ ಯುವಕ ಸಂಘ, ಚಿರನೂತನ ಮಹಿಳಾ ಸಂಘ, ದಲಾಲಿ ವರ್ತಕರ ಸಂಘ, ಕಿರಾಣಿ ವರ್ತಕರ ಸಂಘ, ಎಬಿವಿಪಿ, ಯುವ ಬ್ರಿಗೇಡ್, ಪತಂಜಲಿ ಯೋಗ ಸಮಿತಿ ಪ್ರತಿನಿಧಿಗಳು, ಡಿಪ್ಲೊಮಾ ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖರಾದ ಉಮೇಶ ಸಜ್ಜನ್, ಹಿರೇಬಸಪ್ಪ ಸಜ್ಜನ್, ಅಮರೇಶ ಸಾಲಗುಂದ, ರಾಜಶೇಖರ ಸುಂಕದ, ಪಿ. ಸದಾನಂದ, ಎಚ್. ಮಲ್ಲಿಕಾರ್ಜುನ, ಪ್ರವೀಣಕುಮಾರ ಗದ್ದಿ, ಶಿವಕುಮಾರ ಶೀಲವಂತರ, ಚಂದ್ರು ಅರಳಿ, ರೂಪಾ ಸುಂಕದ, ಸಿ. ಎಚ್‌. ಶರಣಪ್ಪ, ಕೆ. ನಾಗಪ್ಪ ಎಲ್‌ವಿಟಿ, ಶಿವಶರಣೇಗೌಡ ಯರಡೋಣಾ, ಬಿಲ್ಗಾರ್ ಯರಿಸ್ವಾಮಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್‌ ಮಹಾಂತಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT