ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖಂಡರಿಂದ ಜನಾಶೀರ್ವಾದ ಯಾತ್ರೆಯ ಸಿದ್ಧತೆ ಪರಿಶೀಲನೆ

ರಾಜ್ಯಕ್ಕೆ ನಾಳೆ ರಾಹುಲ್‌ಗಾಂಧಿ
Last Updated 9 ಫೆಬ್ರುವರಿ 2018, 9:06 IST
ಅಕ್ಷರ ಗಾತ್ರ

ಹೊಸಪೇಟೆ(ಬಳ್ಳಾರಿ): ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಶನಿವಾರ ನಡೆಯಲಿರುವ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯ ಸಿದ್ಧತೆಯನ್ನು ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪರಿಶೀಲಿಸಿದರು.

‘ಶನಿವಾರ ಮಧ್ಯಾಹ್ನ 1ಕ್ಕೆ ರಾಹುಲ್ ಗಾಂಧಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪಾಲ್ಗೊಳ್ಳುವರು. 1.25 ಲಕ್ಷ ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಬಸ್ ವ್ಯವಸ್ಥೆ ಮಾಡಲಾಗಿದೆ’ ಎಂದು ಸಂತೋಷ್‌ ಲಾಡ್‌ ಮಾಹಿತಿ ನೀಡಿದರು.

‘ರಾಹುಲ್ ಗಾಂಧಿ ಕಾರ್ಯಕ್ರಮದ ಭದ್ರತೆಗೆ ಇಬ್ಬರು ಎಸ್ಪಿ, ಮೂವರು ಹೆಚ್ಚುವರಿ ಎಸ್ಪಿ, 14 ಜನ ಡಿವೈಎಸ್ಪಿ, 36 ಜನ ಸಿಪಿಐ ಸೇರಿದಂತೆ ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT