ಸೋಮವಾರ, ಡಿಸೆಂಬರ್ 9, 2019
21 °C

ಕೋಲ್ಕತ್ತ: 2ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: 2ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ಬಂಧನ

ಕೋಲ್ಕತ್ತ: ಎರಡನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ತಿಳಿದ ಬಳಿಕ ಕಾರ್ಮೆಲ್‌ ಪ್ರಾಥಮಿಕ ಶಾಲೆ ಆವರಣದಲ್ಲಿ ನುರಾರು ಸಂಖ್ಯೆಯಲ್ಲಿ ಸೇರಿರುವ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಈ ಕೃತ್ಯ ಎಸಗಿರುವ ಶಿಕ್ಷಕನ್ನು ಅಮಾನತು ಮಾಡಬೇಕು ಮತ್ತು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ನೃತ್ಯ ಶಿಕ್ಷಕ ತಮ್ಮ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಷಕರು ಆರೋಪಿಸಿದ್ದಾಗಿ ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಶಿಕ್ಷಕನ ವರ್ತನೆ ಕುರಿತು ವಿದ್ಯಾರ್ಥಿನಿ ಪೋಷಕರ ಬಳಿ ಗುರುವಾರ ತಿಳಿಸಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಪೋಷಕರು ಪ್ರತಿಭಟನೆ ನಡೆಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಬಂಧಿಸಿ ಕರೆದೊಯ್ಯುವ ವೇಳೆ ಪೋಷಕರು ಆರೋಪಿಯ ಮೇಲೆ ಹಲ್ಲೆಗೆ ಮುಂದಾದ ಪ್ರಸಂಗವೂ ನಡೆಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)