ಸೋಮವಾರ, ಡಿಸೆಂಬರ್ 9, 2019
17 °C

ಕೇಂದ್ರ ಸರ್ಕಾರದ ವಿರುದ್ಧ ಚಂದ್ರಬಾಬು ನಾಯ್ಡು ಆಕ್ರೋಶ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕೇಂದ್ರ ಸರ್ಕಾರದ ವಿರುದ್ಧ ಚಂದ್ರಬಾಬು ನಾಯ್ಡು ಆಕ್ರೋಶ

ನವದೆಹಲಿ: ಆಂಧ್ರ ಪ್ರದೇಶಕ್ಕೆ ಅನುದಾನ ನೀಡಿಕೆ ವಿಚಾರವಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಂಸತ್‌ನಲ್ಲಿ ನೀಡಿದ್ದ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರೋಧ ವ್ಯಕ್ತಪಡಿಸಿದ್ದಾರೆ.

ದುಬೈ ಪ್ರವಾಸದಲ್ಲಿರುವ ಅವರು ಕೇಂದ್ರ ಸಂಪುಟದಲ್ಲಿರುವ ಇಬ್ಬರು ಟಿಡಿಪಿ ಸಚಿವರು ಮತ್ತು ಪಕ್ಷದ ಸಂಸದರ ಜತೆ ಟೆಲಿಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದಾರೆ. ಈ ವೇಳೆ, ‘ಆಂಧ್ರ ಪ್ರದೇಶ ಭಾರತದಲ್ಲಿಲ್ಲ ಎಂಬಂತೆ ಕೇಂದ್ರ ಸರ್ಕಾರ ವರ್ತಿಸುತ್ತಿದೆ’ ಎಂದು ಹೇಳಿದ್ದಾರೆ ಎಂಬುದಾಗಿ ವರದಿಯಾಗಿದೆ. ಅಲ್ಲದೆ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಆಗ್ರಹಿಸಿ ಸಂಸತ್‌ನಲ್ಲಿ ಪಕ್ಷದ ಸಂಸದರು ನಡೆಸುತ್ತಿರುವ ಪ್ರತಿಭಟನೆಯನ್ನು ಮುಂದುವರಿಸುವಂತೆ ನಾಯ್ಡು ಸೂಚಿಸಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಆಗ್ರಹಿಸಿ ಲೋಕಸಭೆಯಲ್ಲಿ ಟಿಡಿಪಿ ಸಂಸದರ ಪ್ರತಿಭಟನೆ ಮುಂದುವರಿದಿದ್ದು, ಕಲಾಪವನ್ನು ಮಾರ್ಚ್ 5ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ...

ಟಿಡಿಪಿ–ಬಿಜೆಪಿ ವಿಚ್ಛೇದನ ಅನಿವಾರ್ಯ

ಪ್ರತಿಕ್ರಿಯಿಸಿ (+)