ಸೋಮವಾರ, ಮೇ 25, 2020
27 °C

ಆರೋಗ್ಯ ಸೂಚ್ಯಂಕ: ಉತ್ತರ ಪ್ರದೇಶ ಅತ್ಯಂತ ಕಳಪೆ ಸಾಧನೆ, ಕೇರಳಕ್ಕೆ ಅಗ್ರ ಪಟ್ಟ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಆರೋಗ್ಯ ಸೂಚ್ಯಂಕ: ಉತ್ತರ ಪ್ರದೇಶ ಅತ್ಯಂತ ಕಳಪೆ ಸಾಧನೆ, ಕೇರಳಕ್ಕೆ ಅಗ್ರ ಪಟ್ಟ

ನವದೆಹಲಿ: ನೀತಿ ಆಯೋಗ ಮತ್ತು ಕೇಂದ್ರ ಆರೋಗ್ಯ ಸಚಿವಾಲಯ ಸಿದ್ಧಪಡಿಸಿರುವ ಆರೋಗ್ಯ ಸೂಚ್ಯಂಕ ವರದಿಯಲ್ಲಿ ಕೇರಳ ಮೊದಲ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶ ಕಳಪೆ ಸಾಧನೆ ಮಾಡಿರುವುದು ತಿಳಿದುಬಂದಿದೆ.

ಆರೋಗ್ಯ ಕ್ಷೇತ್ರದಲ್ಲಿ ಜಾರ್ಖಂಡ್ ಉತ್ತಮ ಪ್ರಗತಿ ತೋರಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಜಾರ್ಖಂಡ್‌, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶಗಳಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಮತ್ತು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ವರದಿ ತಿಳಿಸಿದೆ.

ಆದಾಗ್ಯೂ, ಸೂಚ್ಯಂಕದಲ್ಲಿ ಉನ್ನತ ಸ್ಥಾನದಲ್ಲಿರುವ ರಾಜ್ಯಗಳು ಮೈಮರೆಯದಂತೆ ಹಾಗೂ ಗುಣಮಟ್ಟವನ್ನು ಅದೇ ರೀತಿ ಕಾಪಾಡಿಕೊಳ್ಳುವಂತೆ ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.