ಬುಧವಾರ, ಡಿಸೆಂಬರ್ 11, 2019
°C

ರಾಹುಲ್‌ ಗಾಂಧಿ ಪ್ರಚಾರ ಮಾಡಿದಲ್ಲೆಲ್ಲ ಕಾಂಗ್ರೆಸ್‌ಗೆ ಹಿನ್ನಡೆ: ಯಡಿಯೂರಪ್ಪ

Published:
Updated:
ರಾಹುಲ್‌ ಗಾಂಧಿ ಪ್ರಚಾರ ಮಾಡಿದಲ್ಲೆಲ್ಲ ಕಾಂಗ್ರೆಸ್‌ಗೆ ಹಿನ್ನಡೆ: ಯಡಿಯೂರಪ್ಪ

ಬೆಂಗಳೂರು: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರಚಾರ ಮಾಡಿದ ಬಹುತೇಕ ಕಡೆ ಕಾಂಗ್ರೆಸ್‌ಗೆ ಹಿನ್ನಡೆಯಾಗಿ ಬಿಜೆಪಿ ಜಯ ಗಳಿಸಿದೆ. ಹೀಗಾಗಿ ಅವರು ಬಳ್ಳಾರಿಗೆ ಬರುವುದರಿಂದ ಬಿಜೆಪಿಗೆ ಭಾಗ್ಯವೇ ಬಂದಂತಾಗಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

‘ಚುನಾವಣಾ ಪ್ರಚಾರಕ್ಕೆ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ ಜತೆಗೆ ವಿಡಿಯೊವೊಂದನ್ನೂ ಲಗತ್ತಿಸಿರುವ ಯಡಿಯೂರಪ್ಪ, ‘ಉತ್ತರ ಪ್ರದೇಶದಲ್ಲಿ ಅವರದ್ದು (ಕಾಂಗ್ರೆಸ್) ಅಡ್ರೆಸ್ ಇಲ್ಲ. ರಾಯ್‌ಬರೇಲಿ ಮತ್ತು ಅಮೇಥಿಯಲ್ಲಿ ಮೊನ್ನೆ ನಡೆದ ಸ್ಥಳೀಯಾಡಳಿತ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಕ್ರಾಂತಿಕಾರಕ ಬದಲಾವಣೆಗಳನ್ನು ಮಾಡಿದ್ದಾರೆ. ಹೀಗಾಗಿ ಅಲ್ಲಿ ಇನ್ನು ಯಾವುದೇ ಅವಕಾಶ ಇಲ್ಲ ಎಂಬುದನ್ನು ಅರಿತ ರಾಹುಲ್ ಗಾಂಧಿ ಹೇಗಾದರೂ ಮಾಡಿ ಮುಂದಿನ ಲೋಕಸಭೆ ಚುನಾವಣೆಗೆ ಬಳ್ಳಾರಿಯಿಂದ ಸ್ಪರ್ಧಿಸಬಹುದಾ ಅಂತ ಜನ ಸೇರಿಸಲು ಇಲ್ಲಿಗೆ ಬರುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಅಲ್ಲದೆ, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ ಲೋಕಸಭೆ ಚುನಾವಣೆ ಸ್ಪರ್ಧಿಸಿ ಗೆದ್ದಿರುವುದನ್ನು ಉಲ್ಲೇಖಿಸಿ, ಎಚ್ಚರಿಕೆಯಿಂದ ಇರುವಂತೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಪ್ರತಿಕ್ರಿಯಿಸಿ (+)