ಭಾನುವಾರ, ಡಿಸೆಂಬರ್ 8, 2019
24 °C

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಬೇಡ: ಜಾವೇದ್ ಅಖ್ತರ್ ಟ್ವೀಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಬೇಡ: ಜಾವೇದ್ ಅಖ್ತರ್ ಟ್ವೀಟ್

ಮುಂಬೈ: ‘ವಸತಿ ಪ್ರದೇಶದಲ್ಲಿರುವ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸಬಾರದು’ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದರ ವಿರುದ್ಧ ಕಳೆದ ವರ್ಷ ಸರಣಿ ಟ್ವೀಟ್ ಮಾಡಿದ್ದ ಗಾಯಕ ಸೋನು ನಿಗಂ ಅವರಿಗೆ ಈ ಮೂಲಕ ಜಾವೇದ್ ಬೆಂಬಲ ಸೂಚಿಸಿದ್ದಾರೆ.

‘ಜನವಸತಿ ಪ್ರದೇಶಗಳಲ್ಲಿರುವ ಮಸೀದಿ ಸೇರಿ ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವುದನ್ನು ವಿರೋಧಿಸುತ್ತಿರುವ ಗಾಯಕ ಸೋನು ನಿಗಂ ಅವರ ವಾದವನ್ನು ನಾನು ಒಪ್ಪುತ್ತೇನೆ’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)