ಪಿಡಿಒ ನೇಮಕ: 15 ದಿನಗಳಲ್ಲಿ ತಾತ್ಕಾಲಿಕ ಪಟ್ಟಿ

7

ಪಿಡಿಒ ನೇಮಕ: 15 ದಿನಗಳಲ್ಲಿ ತಾತ್ಕಾಲಿಕ ಪಟ್ಟಿ

Published:
Updated:

ಬೆಂಗಳೂರು: ಖಾಲಿ ಇರುವ ಪಿಡಿಒ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು 15 ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಮೋಟಮ್ಮ ಅವರ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಸಚಿವರ ಪರವಾಗಿ ದೇಶಪಾಂಡೆ ಉತ್ತರಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 227 ಗ್ರಾಮ ಪಂಚಾಯಿತಿಗಳಿವೆ. ಇಲ್ಲಿ ಒಟ್ಟು 61 ಹುದ್ದೆಗಳು ಖಾಲಿ ಇವೆ. ಇದರಲ್ಲಿ ನೇರ ನೇಮಕಾತಿ ಕೋಟಾದಡಿ 36 ಹುದ್ದೆಗಳಿದ್ದು, 26 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಮಾಡಲು ಪ್ರಕ್ರಿಯೆ ನಡೆದಿದೆ. ಉಳಿದ 25 ಖಾಲಿ ಹುದ್ದೆಗಳನ್ನು ಮುಂಬಡ್ತಿ ಕೋಟಾದಡಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry