ಶುಕ್ರವಾರ, ಡಿಸೆಂಬರ್ 6, 2019
24 °C

ಕೆರೆಗೆ ಉರುಳಿದ ಟ್ರ್ಯಾಕ್ಟರ್ ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆರೆಗೆ ಉರುಳಿದ ಟ್ರ್ಯಾಕ್ಟರ್ ಚಾಲಕ ಸಾವು

ಬೆಂಗಳೂರು: ಕೆ.ಆರ್.ಪುರದ ಹೊರಮಾವು ಅಗರ ಕೆರೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದು ಚಾಲಕ ಕಳಕಪ್ಪ (31) ಶುಕ್ರವಾರ ಮೃತಪಟ್ಟಿದ್ದಾರೆ.

ಕೊಪ್ಪಳದ ಅವರು, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಅಗರದ ಕೃಷ್ಣಪ್ಪ ಎಂಬುವರ ಟ್ರ್ಯಾಕ್ಟರ್ ಚಾಲಕರಾಗಿ ಇತ್ತೀಚೆಗೆ ಕೆಲಸಕ್ಕೆ ಸೇರಿದ್ದರು.

ಕಟ್ಟಡ ತ್ಯಾಜ್ಯವನ್ನು ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ರಾಂಪುರದಿಂದ ಸುಬ್ಬಯ್ಯನಪಾಳ್ಳದ ಕಡೆಗೆ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಚಾಲಕ, ಟೆಂಪೊವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಟ್ರ್ಯಾಕ್ಟರ್‌ ಹಿಂದಿಕ್ಕಿದ್ದರು. ಆಗ ಕೆರೆಗೆ ಟ್ರ್ಯಾಕ್ಟರ್‌ ಉರುಳಿದೆ ಎಂದು ಬಾಣಸವಾಡಿ ಸಂಚಾರ ಪೊಲೀಸರು ತಿಳಿಸಿದರು.

‘ಟೆಂಪೊ ಚಾಲಕ ಸ್ಥಳದಲ್ಲಿಯೇ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಅದರ ನೋಂದಣಿ ಸಂಖ್ಯೆ ಆಧರಿಸಿ, ಅವರ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಕ್ರೇನ್‌ ಮೂಲಕ ಟ್ರ್ಯಾಕ್ಟರ್‌ ಅನ್ನು ಕೆರೆಯಿಂದ ಹೊರತೆಗೆಯಲಾಯಿತು’ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)