ಜೇಟ್ಲಿ ಪಾಟೀ ಸವಾಲು

7

ಜೇಟ್ಲಿ ಪಾಟೀ ಸವಾಲು

Published:
Updated:
ಜೇಟ್ಲಿ ಪಾಟೀ ಸವಾಲು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಎಎಪಿಯ ಐವರು ಮುಖಂಡರ ವಿರುದ್ಧ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ದೆಹಲಿ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪಾಟೀ ಸವಾಲನ್ನು ಜಂಟಿ ರಿಜಿಸ್ಟ್ರಾರ್‌ರಿಂದ ಏಕಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿದೆ.

ಇದೇ ಸೋಮವಾರ (ಫೆ.12ರಂದು) ನ್ಯಾಯಮೂರ್ತಿ ರಾಜೀವ್‌ ಸಹಾಯ್‌ ಸಮ್ಮುಖದಲ್ಲಿ ಕೇಜ್ರಿವಾಲ್‌ ಪರ ವಕೀಲರು ಜೇಟ್ಲಿ ಅವರನ್ನು ಪ್ರಶ್ನಿಸಲಿದ್ದಾರೆ. ಈವರೆಗೆ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಸಮ್ಮುಖದಲ್ಲಿ ಪಾಟಿ ಸವಾಲು ನಡೆಯುತ್ತಿತ್ತು.

ಜೇಟ್ಲಿ ಅವರು ದೆಹಲಿ ಕ್ರಿಕೆಟ್‌ ಅಸೋಸಿಯೇಶನ್‌ (ಡಿಡಿಸಿಎ) ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಕೇಜ್ರಿವಾಲ್‌ ಆರೋಪಿಸಿದ್ದರು. ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಿರುದ್ಧ ಜೇಟ್ಲಿ ಅವರು ₹10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry