ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ರಾಷ್ಟ್ರಗಳ ಪ್ರವಾಸ ಆರಂಭ

Last Updated 9 ಫೆಬ್ರುವರಿ 2018, 19:42 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಏಷ್ಯಾದ ಮೂರು ರಾಷ್ಟ್ರಗಳ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತೆರಳಿದ್ದಾರೆ. ಶನಿವಾರ ಪ್ಯಾಲೆಸ್ಟೀನ್‌ಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಭಾರತದ ಪ್ರಧಾನಿಯೊಬ್ಬರು ಪ್ಯಾಲಿಸ್ಟೀನ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.‌‌‌ ಜೋರ್ಡನ್‌, ಯುಎಇ ಮತ್ತು ಒಮನ್‌ ದೇಶಗಳ ಭೇಟಿ ವೇಳೆ ಭದ್ರತೆ ಮತ್ತು ವ್ಯಾಪಾರಕ್ಕೆ ಸಂಬಂಧಿಸಿದಂತೆ ಅಲ್ಲಿಯ ನಾಯಕರೊಂದಿಗೆ ಪ್ರಧಾನಿ ಚರ್ಚಿಸಲಿದ್ದಾರೆ.

‘ನಾಲ್ಕು ದೇಶಗಳೊಂದಿಗೆ ಬಹು ಆಯಾಮದ ಸಂಬಂಧಗಳನ್ನು ಹೊಂದಲು ನಾವು ಬಯಸುತ್ತೇವೆ. ಈ ಭೇಟಿಯ ಮೂಲಕ ಪಶ್ಚಿಮ ಏಷ್ಯಾ ಮತ್ತು ಗಲ್ಫ್‌ ರಾಷ್ಟ್ರಗಳೊಂದಿಗೆ ಸಂಬಂಧಗಳನ್ನು ಗಟ್ಟಿಗೊಳಿಸುವುದು ಮತ್ತು ಭಾರತದ ಅಭಿವೃದ್ಧಿ ಬಲಗೊಳ್ಳುವುದನ್ನು ನಾನು ಎದುರು ನೋಡುತ್ತಿದ್ದೇನೆ’ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ. ಪ್ಯಾಲೆಸ್ಟೀನ್‌ನಲ್ಲಿ ಅಲ್ಲಿಯ ಅಧ್ಯಕ್ಷ ಮಹಮ್ಮದ್‌ ಅಬ್ಬಾಸ್‌ ಅವರನ್ನು  ಮೋದಿ ಭೇಟಿ  ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT