ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಜರ್‌ ವಿರುದ್ಧ ಎಫ್‌ಐಆರ್‌ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

Last Updated 9 ಫೆಬ್ರುವರಿ 2018, 19:44 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಸೇನೆಯ ಅಧಿಕಾರಿಯ ತಂದೆ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ‘ಸುಪ್ರೀಂ’ ಶುಕ್ರವಾರ ಒಪ್ಪಿಗೆ ಸೂಚಿಸಿದೆ. ವಿಚಾರಣೆ ಸೋಮವಾರ ಆರಂಭವಾಗಲಿದೆ.

ಮಗನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಅರ್‌ ರದ್ದುಗೊಳಿಸಬೇಕು ಎಂದು ಕೋರಿ ಸೇನೆಯ ಮೇಜರ್‌ ಅವರ ತಂದೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಶೀಘ್ರವೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಅರ್ಜಿದಾರರ ಪರ ವಕೀಲೆ ಐಶ್ವರ್ಯ ಭಟಿ ಮಾಡಿಕೊಂಡ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್‌ ಮತ್ತು ಡಿ.ವೈ. ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠ ಪುರಸ್ಕರಿಸಿದೆ.

ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮೇಜರ್‌ ಆದಿತ್ಯ ಕುಮಾರ್‌ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಕಾನೂನು ಬಾಹಿರ ಎಂದು ಭಟಿ ತಿಳಿಸಿದ್ದಾರೆ.

ಶೋಪಿಯಾನ್‌ ಗನೊಪ್ರೊರಾ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿದ ಗುಂಪಿನ ಮೇಲೆ ಸೇನೆಯ ಯೋಧರು ಗುಂಡು ಹಾರಿಸಿದ್ದರು. ಇದರಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT