110 ಯೂನಿಟ್ ರಕ್ತ ಸಂಗ್ರಹ

7

110 ಯೂನಿಟ್ ರಕ್ತ ಸಂಗ್ರಹ

Published:
Updated:

ಬೆಂಗಳೂರು: ಹೆಸರಘಟ್ಟ ಹೋಬಳಿ ಮಾರಸಂದ್ರ ಗ್ರಾಮದ ಪಿಕೆಬಿ ಪದವಿ ಪೂರ್ವ ಕಾಲೇಜು ರೆಡ್‌ಕ್ರಾಸ್‌ ಸಹಯೋಗದಲ್ಲಿ ಶುಕ್ರವಾರ ರಕ್ತದಾನ ಶಿಬಿರವನ್ನು ಏರ್ಪಡಿಸಿತ್ತು.

ಶಿಬಿರದಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. 110 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಪಿಕೆಬಿ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ಮಾರ ಹನುಮಯ್ಯ ಅವರು ಅಗಲಿ ಐದು ವರ್ಷಗಳಾ

ಗಿದ್ದು, ಅವರ ನೆನಪಿನಲ್ಲಿ ಈ ಶಿಬಿರವನ್ನು ಆಯೋಜಿಸಿದ್ದೇವೆ’ ಎಂದು ಶಾಲೆಯ ಪ್ರಾಂಶುಪಾಲ ಕರಗದಯ್ಯ ಅವರು ಹೇಳಿದರು.

ರೆಡ್‌ಕ್ರಾಸ್ ಸಂಸ್ಥೆಯ ವೈದ್ಯ ಡಾ.ಪ್ರಶಾಂತ್, ‘ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ‍ಪಾಲ್ಗೊಂಡಿದ್ದರು. ಕಾಲೇಜಿನ ಅಕ್ಕಪಕ್ಕದ ಕೈಗಾರಿಕೆಗ

ಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ. ರಕ್ತದಾನದ ಬಗ್ಗೆ ಅರಿವು ಮೂಡಿರುವುದು ನಿಜಕ್ಕೂ ಸಂತಸದ ವಿಷಯ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry