‘ಎಡಪಕ್ಷಗಳ ಜತೆ ಮೈತ್ರಿ ರಾಜ್ಯಕ್ಕೆ ಅನ್ವಯಿಸದು‘

7

‘ಎಡಪಕ್ಷಗಳ ಜತೆ ಮೈತ್ರಿ ರಾಜ್ಯಕ್ಕೆ ಅನ್ವಯಿಸದು‘

Published:
Updated:
‘ಎಡಪಕ್ಷಗಳ ಜತೆ ಮೈತ್ರಿ ರಾಜ್ಯಕ್ಕೆ ಅನ್ವಯಿಸದು‘

ಹರಿಹರ: ‘ಎಡಪಕ್ಷಗಳ ಜೊತೆಗಿನ ಚುನಾವಣೆ ಹೊಂದಾಣಿಕೆ ಕುರಿತು ಸೋನಿಯಾ ಗಾಂಧಿ ಅವರ ಹೇಳಿಕೆ ರಾಷ್ಟ್ರ ಮಟ್ಟಕ್ಕೆ ಸೀಮಿತ. ಅದು ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ. ಬಿಎಸ್‌ಪಿ ಜತೆ ಜೆಡಿಎಸ್ ಹೊಂದಾಣಿಕೆ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾತಿ ಜನಗಣತಿ ವರದಿಯನ್ನು ಆಯೋಗ ಸರ್ಕಾರಕ್ಕೆ ಸಲ್ಲಿಸಿದ ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ, ಸಂಬಂಧಪಟ್ಟ ಇಲಾಖೆ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸುವರು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry