ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನಾರ್ದನ ಪೂಜಾರಿ ನೈಜ ಆರ್‌ಎಸ್‌ಎಸ್‌ ವ್ಯಕ್ತಿ’

Last Updated 10 ಫೆಬ್ರುವರಿ 2018, 6:53 IST
ಅಕ್ಷರ ಗಾತ್ರ

ಮಂಗಳೂರು: ಕರಾವಳಿಯಲ್ಲಿ ಬಿಲ್ಲವ ಯುವಕರು ದಾರಿ ತಪ್ಪಲು ಹಾಗೂ ಗಲಾಟೆಗಳು ಸಂಭವಿಸಲು ಕಾಂಗ್ರೆಸ್‌ ಮುಖಂಡ ಜನಾರ್ದನ ಪೂಜಾರಿ ಅವರೇ ಕಾರಣ. ಬಿಲ್ಲವ ಯುವಕರ ಬಗ್ಗೆ ಅವರಿಗೆ ಕಿಂಚಿತ್ತೂ ಕಾಳಜಿ ಇಲ್ಲ. ಅವರೊಬ್ಬ ನಿಜವಾದ ಆರ್‌ಎಸ್‌ಎಸ್‌ ವ್ಯಕ್ತಿ’ ಎಂದು ಯುವ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

‘ಪೂಜಾರಿ ಅವರು ತಮ್ಮ ಆತ್ಮಚರಿತ್ರೆ ಬಿಡುಗಡೆ ಸಮಾರಂಭದಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಪಕ್ಕದಲ್ಲಿ ಕುಳ್ಳಿರಿಸಿಕೊಂಡಿದ್ದರು. ಕಾಂಗ್ರೆಸ್‌ ಪಕ್ಷದೊಳಗೆ ಇದ್ದು, ಪಕ್ಷದ ಮುಖಂಡರನ್ನೇ ಟೀಕಿಸುತ್ತಿದ್ದಾರೆ. ಇದೆಲ್ಲವನ್ನು ನೋಡಿದರೆ, ಇಂತಹ ಅನುಮಾನ ಮೂಡುವುದು ಸಹಜ’ ಎಂದು ಅವರು ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಾ.ಕಲ್ಲಡ್ಕ ಪ್ರಭಾಕರ್‌ ಭಟ್‌  ಅವರ ವಿರುದ್ಧ ಹಲವು ಆರೋಪಗಳಿದ್ದರೂ, ಅವರ ಮೇಲೆ ಪ್ರಕರಣ ದಾಖಲಿಸಲು ಕಾಂಗ್ರೆಸ್‌ ಸರ್ಕಾರ, ಇಲ್ಲಿನ ಸಚಿವರುಗಳು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದರು. ‘ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರನ್ನು ಗೋಮೂತ್ರದಿಂದ ತೊಳೆಯಿರಿ. ಆಗಲಾದರೂ ಅವರು ಸರಿಯಾಗಬಹುದು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT