ಅಭಿವೃದ್ಧಿಗೆ ಆದ್ಯತೆ

7

ಅಭಿವೃದ್ಧಿಗೆ ಆದ್ಯತೆ

Published:
Updated:

‌ಸಿದ್ದಾಪುರ: ಜಿಲ್ಲಾ ಪಂಚಾಯಿತಿ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಲಭ್ಯವಿರುವ ಅನುದಾನವನ್ನು ಮೂಲಸೌಕರ್ಯಗಳಿಗೆ, ಸ್ವಚ್ಛತೆ ನಿರ್ವಹಣೆಗೆ ಮತ್ತು ಪಟ್ಟಣ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರಿತಾ ಪೂಣಚ್ಚ ಹೇಳಿದರು.‌

ಪಟ್ಟಣದ ಮಾರುಕಟ್ಟೆ ಪ್ರದೇಶದಿಂದ ಮುತ್ತಪ್ಪ ದೇವಸ್ಥಾನಕ್ಕೆ ಸಾಗುವ ರಸ್ತೆಗೆ ಜಿಲ್ಲಾ ಪಂಚಾಯಿತಿ ಅನುದಾನದಡಿ ₹ 5 ಲಕ್ಷ ವೆಚ್ಚದಲ್ಲಿ ಮತ್ತು ವೀರಾಜಪೇಟೆ ರಸ್ತೆಗೆ ₹ 1.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಂಟರ್‌ಲಾಕ್ ಕಾಮಗಾರಿಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಟ್ಟಣದ ಪ್ರಮುಖ ಸಮಸ್ಯೆ ಆಗಿರುವ ತ್ಯಾಜ ವಿಲೇವಾರಿ ಘಟಕ ಸ್ಥಾಪನೆಗೆ ಸ್ಥಳ ಗುರುತಿಸಿದ್ದು ವೈಜ್ಞಾನಿಕ ತ್ಯಾಜ ನಿರ್ವಹಣೆಗೆ ಅಗತ್ಯವಿರುವ ಉಪಕರಣಗಳ ಅಳವಡಿಕೆ ಕುರಿತು ಪರಿಶೀಲಿಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಮಣಿ, ಸೋಲಿಗ ಸಮುದಾಯ ಸೇರಿದಂತೆ ಭಿನ್ನ ಸಮುದಾಯಗಳು ವಾಸಿಸುತ್ತಿರುವ ಅವರೆಗುಂದ ಗ್ರಾಮದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದ್ದು, ಬೋರ್‌ವೆಲ್‌ಗಳನ್ನು ಕೊರೆಯಲಾಗಿದೆ. ಅನೇಕ ಕುಟುಂಬಗಳು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಆರಣ್ಯ ವಾಸಿಗಳಿಗೆ ವಿದ್ಯುತ್, ನೀರು ಕಲ್ಪಿಸಿದ್ದು ಮತ್ತು ಸೋಲಾರ್ ಉಪಕರಣಗಳನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಕೆ.ಮಣಿ, ಸದಸ್ಯರಾದ ಟಿ.ಎಚ್.ಮಂಜುನಾಥ್,ಜಾಫರ್ ಅಲಿ, ದೇವಜಾನು, ಅಬ್ದುಲ್ ಶುಕೂರ್,ಸರೋಜ,ಪ್ರೇಮ, ಪ್ರತಿಮಾ ,ವಲಯ ಕಾಂಗ್ರೆಸ್ ಅಧ್ಯಕ್ಷ ಎಂ.ಎಚ್.ಮೂಸ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry