ಗುರುವಾರ , ಡಿಸೆಂಬರ್ 12, 2019
24 °C

ಮೋದಿ ದೇಶ ಕಂಡ ಮಹಾನ್ ಸುಳ್ಳುಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೋದಿ ದೇಶ ಕಂಡ ಮಹಾನ್ ಸುಳ್ಳುಗಾರ

ಸೋಮವಾರಪೇಟೆ: ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ. ಸುಳ್ಳು ಭರವಸೆಗಳನ್ನು ನೀಡಿದ ದೇಶ ಕಂಡ ಮಹಾನ್ ಸುಳ್ಳುಗಾರ ಎಂದು ಎಐಸಿಸಿ ಕಾರ್ಯದರ್ಶಿ ಮತ್ತು ಮೈಸೂರು ವಿಭಾಗ ಉಸ್ತುವಾರಿ ವಿಶ್ವನಾದನ್ ದೂರಿದರು.

ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಗುರುವಾರ ಸೋಮವಾರ ಪೇಟೆ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಬ್ಲಾಕ್ ಸಮಿತಿಯ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

‘2013ರಲ್ಲಿ ಸುಳ್ಳು ಭರವಸೆಗಳನ್ನು ನೀಡಿ ದೇಶದ ಪ್ರಧಾನಿಯಾದ ಮೋದಿ, ಉದ್ಯೋಗ ಸೃಷ್ಟಿಸುವ ಕೆಲಸ ಮಾಡಲಿಲ್ಲ. ವಿದೇಶದಿಂದ ಕಪ್ಪು ಹಣವನ್ನು ತಂದು ಯಾರ ಖಾತೆಗೂ ಹಾಕಲಿಲ್ಲ. ಪದವೀಧರರನ್ನು ಪಕೋಡ ಮಾಡಿ ವ್ಯಾಪಾರ ಮಾಡಿ ಹಣ ಸಂಪಾದಿಸಿ ಎಂದು ಹೇಳಿರುವುದು ಖಂಡನೀಯ’ ಎಂದರು. ಕೆಪಿಸಿಸಿ ಕಾರ್ಯದರ್ಶಿ ವೆಂಕಪ್ಪಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಲೋಕೇಶ್ ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ವಿ.ಪಿ. ಶಶಿಧರ್‌, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜೆ.ಆರ್.ಪುಷ್ಪಲತಾ, ಕೆಪಿಸಿಸಿ ಎಸ್ಸಿ ಘಟಕದ ರಾಜ್ಯ ಸಂಚಾಲಕ ಬಿ.ಇ. ಜಯೇಂದ್ರ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕೂಬ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಶುಭದಾಯಿನಿ, ಮಡಿಕೇರಿ, ನಾಪೊಕ್ಲು ಬ್ಲಾಕ್ ಅಧ್ಯಕ್ಷರಾದ ಅಪ್ಪು ರವೀಂದ್ರ, ರಮನಾಥ್, ಕೆ.ಪಿ.ಚಂದ್ರಕಲಾ, ನಾಪಂಡ ಮುತ್ತಪ್ಪ, ಚಂದ್ರಮೌಳಿ, ವಿರೂಪಾಕ್ಷಪ್ಪ, ನಂದ ಕುಮಾರ್, ತನ್ನಿರಾ ಮೈನಾ, ಎಸ್.ಎಂ.ಚಂಗಪ್ಪ, ಕೊಡ್ಲಿಪೇಟೆ ಹನೀಪ್, ಅಬ್ಬಾಸ್ ಇದ್ದರು.

ಪ್ರತಿಕ್ರಿಯಿಸಿ (+)