ಮಂಗಳೂರು: ಕಾರಿನಲ್ಲಿದ್ದ ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ಗುಂಪು

7

ಮಂಗಳೂರು: ಕಾರಿನಲ್ಲಿದ್ದ ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ಗುಂಪು

Published:
Updated:
ಮಂಗಳೂರು: ಕಾರಿನಲ್ಲಿದ್ದ ಯುವಕ, ಯುವತಿಯ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳ ಗುಂಪು

ಮಂಗಳೂರು: ಇಲ್ಲಿನ ಅದ್ಯಪಾಡಿ ಸಮೀಪ ಕಾರಿನಲ್ಲಿ ತೆರಳುತ್ತಿದ್ದ ಯುವಕ ಯುವತಿಯನ್ನು ತಡೆದ 7 ಜನರಿದ್ದ ದಷ್ಕರ್ಮಿಗಳ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ.

ಹಲ್ಲೆಗೆ ಒಳಗಾದ ಯುವಕ ಯುವತಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿದ ದುಷ್ಕರ್ಮಿಗಳು ಅವರ ಕಾರನ್ನು ತಡೆಯಲು ಯತ್ನಿಸಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಯುವಕ ವಿಚಲಿತನಾಗಿ ಕಾರನ್ನು ರಸ್ತೆಯ ವಿಭಜಕಕ್ಕೆ ಗುದ್ದಿದ್ದಾನೆ. ಈ ವೇಳೆ ಯುವಕ ಯುವತಿಗೆ ಥಳಿಸಿದ ದುಷ್ಕರ್ಮಿಗಳು ಅವರ ಬಳಿ ಇದ್ದ ಚಿನ್ನದ ಸರ, ಮೊಬೈಲ್, ಎಟಿಎಂ ಕಾರ್ಡ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಹಲ್ಲೆಗೆ ಒಳಗಾದ ಯುವಕ ಯುವತಿ ಮಂಗಳೂರಿನ ವಿಮಾನಯಾನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಗಾಯಗೊಂಡ ಯುವಕನನ್ನು ಅತ್ತಾವರ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬಜ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry