ಶುಕ್ರವಾರ, ಡಿಸೆಂಬರ್ 13, 2019
27 °C

2ಎಗೆ ಸೇರಿಸಲು ಬಲಿಜರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

2ಎಗೆ ಸೇರಿಸಲು ಬಲಿಜರ ಪ್ರತಿಭಟನೆ

ಬೆಂಗಳೂರು: ಉದ್ಯೋಗ ಮತ್ತು ರಾಜಕೀಯದಲ್ಲಿ ಮೀಸಲಾತಿ ಪಡೆಯಲು ಬಲಿಜ ಸಮುದಾಯವನ್ನು ಪ್ರವರ್ಗ–2(ಎ)ಗೆ ಸೇರಿಸಬೇಕು ಎಂದು ಒತ್ತಾಯಿಸಿ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ‘ರಾಜ್ಯ ಬಲಿಜ ಯುವಶಕ್ತಿ ಸಂಘಟನೆ’ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಯಿತು.

ಗೃಹ ಸಚಿವ ಭೇಟಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ‘ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ’ ಎಂದು ಸಚಿವರು ಭರವಸೆ ನೀಡಿದರು.

ಪ್ರತಿಕ್ರಿಯಿಸಿ (+)