ಶುಕ್ರವಾರ, ಡಿಸೆಂಬರ್ 13, 2019
27 °C

‘ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ’

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಅವರು ಚಾಲನೆ ನೀಡುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದು, ವಿಧಾನಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಫೆ.9ರಂದು ಶ್ರೀರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಕಾಮಗಾರಿಗಳಿಗೆ ಯತೀಂದ್ರ ಚಾಲನೆ ನೀಡಿದ್ದಾರೆ. ಕಾಮಗಾರಿಗಳಿಗೆ ಚಾಲನೆ ನೀಡಲು ಅವರಿಗೆ ಯಾರು ಆದೇಶ ನೀಡಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

224 ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವುಗಳಲ್ಲಿ ಮೀಸಲು ಕ್ಷೇತ್ರಗಳೂ ಇವೆ ಎಂಬುದನ್ನು ಮರೆತರೆ ಎಂದುಪ್ರಶ್ನಿಸಿದರು. ಅವರು ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ ಎಂದರು

ಪ್ರತಿಕ್ರಿಯಿಸಿ (+)