ಹಾಸನದಲ್ಲಿ 7 ಸೆಂ.ಮೀ. ಮಳೆ

7

ಹಾಸನದಲ್ಲಿ 7 ಸೆಂ.ಮೀ. ಮಳೆ

Published:
Updated:

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅಲ್ಲಲ್ಲಿ ಮಳೆಯಾಗಿದೆ.

ಹಾಸನದಲ್ಲಿ 7 ಸೆಂ.ಮೀ, ಪಿರಿಯಾಪಟ್ಟಣದಲ್ಲಿ 3, ಚಾಮರಾಜನಗರದ ಬೇಗೂರು ಹಾಗೂ ಚಿಕ್ಕಬಳ್ಳಾಪುರದ ತೊಂಡೆಬಾವಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವೆಡೆ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಬೀದರ್‌ನಲ್ಲಿ 13.4 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಕಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry