ಹೊರಟ್ಟಿ ರಾಜೀನಾಮೆ ಅಂಗೀಕಾರ

7

ಹೊರಟ್ಟಿ ರಾಜೀನಾಮೆ ಅಂಗೀಕಾರ

Published:
Updated:

ಹುಬ್ಬಳ್ಳಿ: ಲಿಂಗಾಯತ ಸ್ವತಂತ್ರ ಧರ್ಮ ಚಳವಳಿಯಲ್ಲಿ ಸಕ್ರಿಯರಾಗಿರುವ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ, ವೀರಶೈವ ಲಿಂಗಾಯತ ಮಹಾಸಭಾದ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ.

ರಾಜೀನಾಮೆ ಅಂಗೀಕರಿಸಿ ಮರು ಪತ್ರ ಬರೆದಿರುವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ‘ಮಹಾಸಭೆಯ ಮಹಾದಾನಿ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ ಎಂದು ತಿಳಿಸಲು ವಿಷಾದಿಸುತ್ತೇನೆ. ನಿಮ್ಮ ಮುಂದಿನ ಕೆಲಸ ಕಾರ್ಯಗಳಿಗೆ ಬಸವಾದಿ ಶರಣರು ತಮ್ಮ ಕೈಹಿಡಿದು ನಡೆಸಲಿ ಎಂದು ಮಹಾಸಭೆಯು ಪ್ರಾರ್ಥಿಸುತ್ತದೆ’ ಎಂದು ತಿಳಿಸಿದ್ದಾರೆ.

ಜನವರಿ 25ರಂದು ಹೊರಟ್ಟಿ ರಾಜೀನಾಮೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry