7

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ 5 ವರ್ಷ ಜೈಲು ಶಿಕ್ಷೆ

Published:
Updated:

ಬೆಂಗಳೂರು: ಪಿಯು ಪ್ರಶ್ನೆ ಪರೀಕ್ಷೆ ಸೋರಿಕೆ ಮಾಡುವವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯನ್ನು ಎಲ್ಲ ಕಾಲೇಜುಗಳಲ್ಲೂ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

ಎಸ್‌ಎಂಎಸ್‌, ಮೊಬೈಲ್‌ ಹಾಗೂ ಇನ್ನಿತರ ಮಾರ್ಗಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದವರನ್ನು ಜೈಲು ಶಿಕ್ಷೆಗೆ ಗುರಿಪಡಿಸಲು ಕರ್ನಾಟಕ ಶಿಕ್ಷಣ ಕಾಯ್ದೆಯಡಿ ಅವಕಾಶ ಇದೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry