ಭಾನುವಾರ, ಡಿಸೆಂಬರ್ 8, 2019
24 °C

ಪಾಕಿಸ್ತಾನದ ಮಾನವಹಕ್ಕುಗಳ ಹೋರಾಟಗಾರ್ತಿ ಆಸ್ಮಾ ಜಹಾಂಗೀರ್ ನಿಧನ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಪಾಕಿಸ್ತಾನದ ಮಾನವಹಕ್ಕುಗಳ ಹೋರಾಟಗಾರ್ತಿ ಆಸ್ಮಾ ಜಹಾಂಗೀರ್ ನಿಧನ

ಇಸ್ಲಾಮಾಬಾದ್ : ಪಾಕಿಸ್ತಾನದ ಸಾಮಾಜಿಕ ಕಾರ್ಯಕರ್ತೆ, ಮಾನವಹಕ್ಕುಗಳ ಹೋರಾಟಗಾರ್ತಿ, ವಕೀಲೆ ಆಸ್ಮಾ ಜಹಾಂಗೀರ್‌ ಅವರು ಹೃದಯಸ್ತಂಭನಕ್ಕೆ ಒಳಗಾಗಿ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ವಕೀಲೆ ಆಸ್ಮಾ(66) ಅವರಿಗೆ ಭಾನುವಾರ ಬೆಳಿಗ್ಗೆ ಹೃದಯಾಘಾತವಾಗಿತ್ತು. ತಕ್ಷಣ ಲಾಹೋರಿನ ಹಮೀದ್ ಲತೀಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಎಷ್ಟೇ ಪ್ರಯತ್ನಿಸಿದರೂ ಅವರು ಬದುಕುಳಿಯಲಿಲ್ಲ ಎಂದು ಹಿರಿಯ ವಕೀಲ ಅದೀಲ್ ರಾಜಾ ಅವರು ತಿಳಿಸಿದರು.

ಆಸ್ಮಾ ಅವರ ಸಾವಿನ ಸುದ್ದಿಯನ್ನು ತಿಳಿದು ಮರುಗಿದ ಪಾಕಿಸ್ತಾನದ ವಕೀಲರು, ಮಾನವಹಕ್ಕುಗಳ ಹೋರಾಟಗಾರರು, ರಾಜಕಾರಣಿಗಳು, ಆಸ್ಮಾ ಅವರ ಸಾವು ಪಾಕಿಸ್ತಾನಕ್ಕೆ ತುಂಬಲಾರದ ನಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಸ್ಮಾ ಅವರಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದಾರೆ.

1952ರಲ್ಲಿ ಲಾಹೋರ್‌ನಲ್ಲಿ ಜನಿಸಿದ ಆಸ್ಮಾ ಅವರು ಪಾಕಿಸ್ತಾನದ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷರು ಹಾಗೂ ಸಹ ಸಂಸ್ಥಾಪಕರಾಗಿದ್ದರು. ಪಂಜಾಬ್ ವಿಶ್ವವಿದ್ಯಾಲಯದಿಂದ 1972ರಲ್ಲಿ ಕಾನೂನು ಪದವಿ ಪಡೆದ ಅವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್‌ ವಕೀಲರಾಗಿಯೂ ಸೇವೆ ಸಲ್ಲಿಸಿದ್ದರು.

ಪ್ರತಿಕ್ರಿಯಿಸಿ (+)