7

ಕಲಾವಿದ ಚಿಕ್ಕ ಸುರೇಶ್‌ ನಿಧನ

Published:
Updated:
ಕಲಾವಿದ ಚಿಕ್ಕ ಸುರೇಶ್‌ ನಿಧನ

ಬೆಂಗಳೂರು: ಸಿನಿಮಾ ಹಾಗೂ ಕಿರುತೆರೆ ಕಲಾವಿದ ಚಿಕ್ಕ ಸುರೇಶ್ (53) ಅವರು ಅನಾರೋಗ್ಯದಿಂದ ಶನಿವಾರ ನಿಧನರಾದರು.

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದವರು ತಿಳಿಸಿದರು.

ಕೆಲ ದಿನಗಳ ಹಿಂದಷ್ಟೇ ಪ್ರವಾಸಕ್ಕೆಂದು ಅವರು ಕುಟುಂಬ ಸಮೇತ ಗೋವಾಕ್ಕೆ ಹೋಗಿದ್ದರು. ಜ್ವರದಿಂದ ಬಳಲುತ್ತಿದ್ದ ಅವರನ್ನು ಪಣಜಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ಆಂಬುಲೆನ್ಸ್‌ನಲ್ಲಿ ನಗರಕ್ಕೆ ಕರೆತಲಾಗಿತ್ತು. ದಾರಿ ಮಧ್ಯೆ ನಸುಕಿನಲ್ಲಿ ಅವರು ಅಸುನೀಗಿದರು.

ಅಭಿನಯ ತರಂಗದಿಂದ ಕಲಾವಿದರಾಗಿ ರೂಪಗೊಂಡಿದ್ದ ಸುರೇಶ್‌, 30 ಸಿನಿಮಾ, 20 ಧಾರಾವಾಹಿ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದರು. ಸಾಹಿತಿಗಳು, ಕಲಾವಿದರು ಹಾಗೂ ರಂಗಕರ್ಮಿಗಳ ಕುರಿತ ಸಾಕ್ಷ್ಯಚಿತ್ರಗಳನ್ನು ಅವರು ನಿರ್ದೇಶಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry