ಬುಧವಾರ, ಡಿಸೆಂಬರ್ 11, 2019
26 °C

ನಕ್ಸಲ್ ನಿಗ್ರಹಕ್ಕೆ ₹1,344 ಕೋಟಿ ಅನುದಾನ

ಪಿಟಿಐ Updated:

ಅಕ್ಷರ ಗಾತ್ರ : | |

ನಕ್ಸಲ್ ನಿಗ್ರಹಕ್ಕೆ ₹1,344 ಕೋಟಿ ಅನುದಾನ

ನವದೆಹಲಿ: 2018–19ರ ಅವಧಿಗೆ ದೇಶದಾದ್ಯಂತ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಸಲು ಹಾಗೂ ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ ₹1,344 ಕೋಟಿ ಅನುದಾನ ಘೋಷಿಸಿದೆ.

35 ನಕ್ಸಲ್ ಪೀಡಿತ ಜಿಲ್ಲೆಗಳ ವಿವಿಧ ಯೋಜನೆಗಳಿಗೆ ಈ ಅನುದಾನ ನೀಡಲಾಗುತ್ತಿದೆ ಎಂದು ಬಜೆಟ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ನಕ್ಸಲ್ ಪೀಡಿತ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸರಬರಾಜು, ಶಾಲಾ ಕಟ್ಟಡಗಳು, ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮೀಣ ರಸ್ತೆಗಳ ನಿರ್ಮಾಣ ಈ ಯೋಜನೆಯ ಉದ್ದೇಶ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)