4 ಕೆ.ಜಿ. ಚಿನ್ನ ಕಳ್ಳ ಸಾಗಣೆ: ನಾಲ್ವರ ಬಂಧನ

7

4 ಕೆ.ಜಿ. ಚಿನ್ನ ಕಳ್ಳ ಸಾಗಣೆ: ನಾಲ್ವರ ಬಂಧನ

Published:
Updated:

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರನ್ನು ಶನಿವಾರ ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು, ₹ 1.22 ಕೋಟಿ ಮೌಲ್ಯದ 4 ಕೆ.ಜಿ. ತೂಕದ ಚಿನ್ನ ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಕೇರಳದ ಕಾಸರಗೋಡು ಜಿಲ್ಲೆಯ ಹಸನ್‌ ಮತ್ತು ಸಮೀರಾ ದಂಪತಿಯನ್ನು ಶನಿವಾರ ಬೆಳಿಗ್ಗೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ದುಬೈನಿಂದ ನೇಪಾಳದ ಕಠ್ಮಂಡು ವಿಮಾನ ನಿಲ್ದಾಣಕ್ಕೆ ಚಿನ್ನ ಕಳ್ಳಸಾಗಣೆ ಮಾಡಿಕೊಂಡು ಬಂದು, ಅಲ್ಲಿಂದ ಭಾರತ ಪ್ರವೇಶಿಸಿದ್ದ ಕೇರಳದ ಕೋಯಿಕ್ಕೋಡ್‌ನ ಮೊಯಿದ್ದೀನ್‌ ಮತ್ತು ಸಂಶುದ್ದೀನ್‌ ಎಂಬುವವರನ್ನು ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry