ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಗಳಲ್ಲಿ ಅಧ್ಯಯನಕ್ಕೂ ನೀಟ್ ಕಡ್ಡಾಯ?

Last Updated 11 ಫೆಬ್ರುವರಿ 2018, 19:31 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎಂಬಿಬಿಎಸ್ ‍ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಈ ಪ್ರಸ್ತಾವನೆ ಅಂತಿಮ ಹಂತದಲ್ಲಿ ಇದೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

‍ಪ್ರಸ್ತುತ ದೇಶದ ಯಾವುದೇ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳು ನೀಟ್ ತೇರ್ಗಡೆ ಆಗುವುದು ಕಡ್ಡಾಯವಾಗಿದೆ.

ಶೇ 15 ಮಂದಿ ಎಫ್‌ಎಂಜಿಇ ತೇರ್ಗಡೆ: ‘ವಿದೇಶಗಳಲ್ಲಿ ಅಧ್ಯಯನ ಮಾಡಿ ವಾಪಸಾಗುವವರಲ್ಲಿ ಶೇ 12ರಿಂದ 15ರಷ್ಟು ಪದವೀಧರರು ಮಾತ್ರ ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆ (ಎಫ್‌ಎಂಜಿಇ) ತೇರ್ಗಡೆಯಾಗುತ್ತಾರೆ. ಎಫ್‌ಎಂಜಿಇ ತೇರ್ಗಡೆ ಆಗದಿದ್ದಲ್ಲಿ ಅವರು ಭಾರತದಲ್ಲಿ ವೈದ್ಯಕೀಯ ವೃತ್ತಿ ಆರಂಭಿಸಲು ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಅಧಿಕಾರಿ ಹೇಳಿದ್ದಾರೆ.

‘ನೋಂದಣಿ ಸಾಧ್ಯವಾಗದವರು ಅಕ್ರಮವಾಗಿ ವೈದ್ಯಕೀಯ ವೃತ್ತಿ ನಡೆಸುತ್ತಾರೆ. ಇದು ಅಪಾಯಕಾರಿ. ಆದ್ದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ದೊರಕಲಿ ಎನ್ನುವುದು ಇದರ ಉದ್ದೇಶ’ ಎಂದು ಅವರು ವಿವರಿಸಿದ್ದಾರೆ. ಪ್ರತಿವರ್ಷ ಅಂದಾಜು 7 ಸಾವಿರ ವಿದ್ಯಾರ್ಥಿಗಳು ವಿದೇಶಗಳಲ್ಲಿ ವೈದ್ಯಕೀಯ ಅಭ್ಯಾಸ ಮಾಡಲು ತೆರಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT