ಶುಕ್ರವಾರ, ಡಿಸೆಂಬರ್ 13, 2019
27 °C

ಮೋದಿ ಸಂವಾದ: ಟಿ.ವಿ ಬಾಡಿಗೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೋದಿ ಸಂವಾದ: ಟಿ.ವಿ ಬಾಡಿಗೆಗೆ

ಬೆಂಗಳೂರು: ಪರೀಕ್ಷಾ ಒತ್ತಡ ನಿಭಾಯಿಸುವ ಕುರಿತು ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳೊಂದಿಗೆ ಇದೇ 16ರಂದು ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ಸಂವಾದ ವೀಕ್ಷಿಸಲು ಟಿ.ವಿ ಮತ್ತು ಜನರೇಟರ್ ವ್ಯವಸ್ಥೆ ಮಾಡಿಕೊಳ್ಳುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಜ್ಯದ ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಬೆಳಿಗ್ಗೆ 11ರಿಂದ 12 ಗಂಟೆಯವರೆಗೆ ನಡೆಯಲಿರುವ ಈ ಸಂವಾದ ಡಿಡಿ ನ್ಯಾಷನಲ್, ಡಿಡಿ ನ್ಯೂಸ್, ಡಿಡಿ ಇಂಡಿಯಾ ವಾಹಿನಿ, ರೇಡಿಯೋ ಚಾನಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ. ಈ ಸಂವಾದ ವೀಕ್ಷಣೆಗೆ ಅಗತ್ಯವಾದ ಪರಿಕರಗಳು ಇಲ್ಲದಿದ್ದರೆ ತಾತ್ಕಾಲಿಕವಾಗಿ ಬಾಡಿಗೆ ಪಡೆಯುವಂತೆ ಈ ಪತ್ರದಲ್ಲಿ ಸೂಚಿಸಿದೆ.

ಪ್ರತಿಕ್ರಿಯಿಸಿ (+)