ಬುಧವಾರ, ಡಿಸೆಂಬರ್ 11, 2019
26 °C

ಚುನಾವಣಾ ರಾಜಕೀಯದಿಂದ ಹೊರಗೆ: ಉಮಾ ಭಾರತಿ ಘೋಷಣೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಚುನಾವಣಾ ರಾಜಕೀಯದಿಂದ ಹೊರಗೆ: ಉಮಾ ಭಾರತಿ ಘೋಷಣೆ

ಝಾನ್ಸಿ: ಭವಿಷ್ಯದಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಮುಂದೆಯೂ ಪಕ್ಷಕ್ಕಾಗಿ ಕಾರ್ಯ ನಿರ್ವಹಿಸುವುದಾಗಿ ಕೇಂದ್ರ ಸಚಿವೆ ಉಮಾ ಭಾರತಿ ಹೇಳಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರೋಗ್ಯ ಹಾಗೂ ವಯಸ್ಸಿನ ಕಾರಣಗಳಿಂದಾಗಿ ಚುನಾವಣಾ ರಾಜಕೀಯದಿಂದ ಹೊರನಡೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಝಾನ್ಸಿ ಕ್ಷೇತ್ರದಿಂದ ಎರಡು ಬಾರಿ ಸಂಸದೆಯಾಗಿ ಆಯ್ಕೆಯಾಗಿರುವ ಅವರು ಸಾಕಷ್ಟು ಕೆಲಸ ಮಾಡಿರುವುದಾಗಿ ತಿಳಿಸಿದ್ದು, ಮಂಡಿ ಹಾಗೂ ಸೊಂಟದ ನೋವಿನಿಂದ ಬಳಲುತ್ತಿರುವುದಾಗಿಯೂ ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)