ಬುಧವಾರ, ಡಿಸೆಂಬರ್ 11, 2019
17 °C

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿ; ಜೀವಂತ ಸುಡಲು ಯತ್ನಿಸಿದ ದುಷ್ಕರ್ಮಿಗಳು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಬಾಲಕಿ; ಜೀವಂತ ಸುಡಲು ಯತ್ನಿಸಿದ ದುಷ್ಕರ್ಮಿಗಳು

ರಾಜಗಢ: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ದಲಿತ ಅಪ್ರಾಪ್ತೆಯನ್ನು ಜೀವಂತವಾಗಿ ಸುಡಲು ಯತ್ನಿಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಸುಸ್ತಾನಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 

ಬಾಲಕಿಯ ದೇಹ ಅರ್ಧದಷ್ಟು ಸುಟ್ಟಿದ್ದು, ಭೋಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ‘ನನ್ನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು’ ಎಂದು ಬಾಲಕಿ ಹೇಳಿಕೆ ಕೊಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯು ಮನೆಯಲ್ಲಿ ಒಂಟಿಯಾಗಿದ್ದಾಗ ಈ ಘಟನೆ ನಡೆದಿದೆ. ಮನೆ ಪ್ರವೇಶಿಸಿರುವ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು ಎಂದು ಬಾಲಕಿಯು ಘಟನೆಯನ್ನು ವಿವರಿಸಿದ್ದಾಳೆ.

ಈ ಬಗ್ಗೆ ರಾಜಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಹುಡುಕಾಟಕ್ಕಾಗಿ ಮೂವರು ಸದಸ್ಯರ ಪೊಲೀಸ್ ತಂಡ ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಶಂಭು ಸಿಂಗ್ ಅಹಿರ್ವಾಲ್ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)