ಭಾನುವಾರ, ಡಿಸೆಂಬರ್ 8, 2019
24 °C

ಕಲಬುರ್ಗಿ: ರಾಹುಲ್ ಗಾಂಧಿಗೆ ಕಪ್ಪು ಬಟ್ಟೆ ಪ್ರದರ್ಶನ: ಬಿಜೆಪಿ ಕಾರ್ಯಕರ್ತರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ರಾಹುಲ್ ಗಾಂಧಿಗೆ ಕಪ್ಪು ಬಟ್ಟೆ ಪ್ರದರ್ಶನ: ಬಿಜೆಪಿ ಕಾರ್ಯಕರ್ತರ ಬಂಧನ

ಕಲಬುರ್ಗಿ: ಇಲ್ಲಿನ ಜೇವರ್ಗಿ ತಾಲ್ಲೂಕಿನ ಕೆಲ್ಲೂರ ಬಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ತೊಗರಿ ಖರೀದಿ ಕೇಂದ್ರ ಹೆಚ್ಚಳ ಹಾಗೂ ರೈತರ ಹೆಸರು ನೋಂದಣಿಗೆ ಒತ್ತಾಯಿಸಿದ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾಗಿದ್ದರು.

ರಾಹುಲ್ ಗಾಂಧಿ ಅವರು ಯಾದಗಿರಿ ಜಿಲ್ಲೆಯ ಶಹಾಪುರದಿಂದ ಜೇವರ್ಗಿಗೆ ಬರುವುದಕ್ಕೂ ಮುನ್ನವೇ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಪ್ಪ ಗೌಡ ಪಾಟೀಲ, ಧರ್ಮಣ್ಣ ದೊಡ್ಡಮನಿ ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಪ್ರತಿಕ್ರಿಯಿಸಿ (+)