ಬುಧವಾರ, ಡಿಸೆಂಬರ್ 11, 2019
24 °C

ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್‌: ಯಡಿಯೂರಪ್ಪ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್‌: ಯಡಿಯೂರಪ್ಪ ವ್ಯಂಗ್ಯ

ಬೆಂಗಳೂರು: ‘ಮೀನು ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡೋ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್‌ ಗಾಂಧಿ ಮತ್ತೊಂದು ಕಡೆ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಮೂರನೇ ದಿನ ಕಾಂಗ್ರೆಸ್‌ ‘ಜನಾಶೀರ್ವಾದ ಯಾತ್ರೆ’ಯಲ್ಲಿ ಪಾಲ್ಗೊಂಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಯಚೂರಿನಲ್ಲಿ ಸೋಮವಾರ ನರಸಿಂಹ ಸ್ವಾಮಿಯ ದೇವಾಲಯಕ್ಕೆ ಭೇಟಿ ನೀಡಿದರು.

ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಬಿ.ಎಸ್‌. ಯಡಿಯೂರಪ್ಪ, ‘ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ’ ಎಂದು ಟೀಕಿಸಿದ್ದಾರೆ.

ಮತ್ತೊಂದು ಟ್ವೀಟ್‌ ಮಾಡಿರುವ ಬಿ.ಎಸ್‌.ವೈ, ‘ದರ್ಗಾಕ್ಕೆ ಭೇಟಿ ನೀಡುವುದರ ಮೂಲಕ ರಾಹುಲ್‌ ಗಾಂಧಿ ಕರ್ನಾಟಕ ಚುನಾವಣಾ ಪ್ರವಾಸ 3ನೇ ದಿನವೂ ಮುಂದುವರೆದಿದೆ. ಕೇಂದ್ರ ಸರ್ಕಾರ ಅಂಗೀಕಾರ ಪಡೆಯಲು ಹೊರಟಿರುವ ‘ತ್ರಿವಳಿ ತಲಾಖ್‌’ ಮಸೂದೆ ಬಗ್ಗೆ ನೀವೇಕೆ ವಿರೋಧಿಸುತ್ತೀರಿ? ಮುಸ್ಲಿಂ ಮಹಿಳೆಯರು ನೆಮ್ಮದಿಯಿಂದಿರುವುದು ನಿಮಗೆ ಬೇಕಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರತಿಕ್ರಿಯಿಸಿ (+)