ಶುಕ್ರವಾರ, ಡಿಸೆಂಬರ್ 6, 2019
25 °C

ಶ್ರೀಲಂಕಾ ತಂಡಕ್ಕೆ ಚುಟುಕು ಸರಣಿ

Published:
Updated:
ಶ್ರೀಲಂಕಾ ತಂಡಕ್ಕೆ ಚುಟುಕು ಸರಣಿ

ಸಿಲ್ಹಟ್‌ : ಕುಶಾಲ್ ಮೆಂಡಿಸ್‌ (70) ಅವರ ಅರ್ಧಶತಕದ ನೆರವಿನಿಂದ ಶ್ರೀಲಂಕಾ ತಂಡ ಬಾಂಗ್ಲಾದೇಶ ಎದುರಿನ ಎರಡನೇ ಟ್ವೆಂಟಿ–20 ಕ್ರಿಕೆಟ್‌ ಪಂದ್ಯವನ್ನು 75ರನ್‌ಗಳಿಂದ ಗೆದ್ದುಕೊಂಡಿದೆ.

ಈ ಗೆಲುವಿನೊಂದಿಗೆ ಶ್ರೀಲಂಕಾ ಎ ರಡು ಪಂದ್ಯಗಳ ಸರಣಿಯನ್ನು 2–0ರಲ್ಲಿ ಗೆದ್ದುಕೊಂಡಿದೆ. ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಜಯ ದಾಖಲಿಸಿತ್ತು. ಭಾನುವಾರದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 210 ರನ್‌ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಮಹಮದುಲ್ಲಾ ಪಡೆ 18.4 ಓವರ್‌ಗಳಲ್ಲಿ 135 ರನ್‌ ಗಳಿಸುವಷ್ಟರಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ನಾಯಕ ಮಹಮದುಲ್ಲಾ (41, 31ಎ, 4 ಬೌಂ, 1ಸಿ) ತಂಡಕ್ಕೆ ಅಲ್ಪ ಕಾಣಿಕೆ ನೀಡಿದರು.

ಮಿಂಚಿದ ಮೆಂಡಿಸ್‌: ಶ್ರೀಲಂಕಾ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ದನುಷ್ಕಾ ಗುಣತಿಲಕ (45), ಕುಶಾಲ್ ಮೆಂಡಿಸ್‌ (70, 42ಎ, 6ಬೌಂ, 3ಸಿ) ಉತ್ತಮ ಜೊತೆಯಾಟ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 98ರನ್‌ ಕಲೆಹಾಕಿತು.

ಪ್ರತಿಕ್ರಿಯಿಸಿ (+)