ಭಾನುವಾರ, ಜೂನ್ 7, 2020
29 °C

ಪ್ರಧಾನಿ ಮೋದಿಗೆ ಮೈಸೂರಿನ ವಿಮಾನನಿಲ್ದಾಣದಲ್ಲಿ ಸಿಎಂ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಧಾನಿ ಮೋದಿಗೆ ಮೈಸೂರಿನ ವಿಮಾನನಿಲ್ದಾಣದಲ್ಲಿ ಸಿಎಂ ಸ್ವಾಗತ

ಬೆಂಗಳೂರು: ಮೈಸೂರಿನಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶ ಸೇರಿದಂತೆ ಸೋಮವಾರ ನಡೆಯುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಜುಭಾಯ್ ವಾಲಾ ಅವರು ಮೈಸೂರಿನ ವಿಮಾನನಿಲ್ದಾಣದಲ್ಲಿ ಭಾನುವಾರ ರಾತ್ರಿ ಸ್ವಾಗತ ಕೋರಿದರು.

ಪ್ರಧಾನಿಗೆ ಗುಲಾಬಿ ಹೂವು ನೀಡಿ, ರೇಷ್ಮೆ ದಡಿಯ ಬಿಳಿಯಶಲ್ಯ ಹಾಕಿ, ಹಸ್ತ ಲಾಘವ ಮಾಡಿ ಸಿಎಂ ಸ್ವಾಗತಿಸಿದರು.

‘ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಳ್ಳಲಾಯಿತು’ ಎಂದು ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಅನಂತಕುಮಾರ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರೂ ಸಹ ಪ್ರಧಾನಿಗೆ ಸ್ವಾಗತಿಸಿದರು.

* ಇವನ್ನೂ ಓದಿ...
* ಮೈಸೂರಿಗೆ ಮೋದಿ; ಕರಾವಳಿಗೆ ಶಾ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.