ಶುಕ್ರವಾರ, ಡಿಸೆಂಬರ್ 13, 2019
27 °C

ದೋನಿ ಉಪಸ್ಥಿತಿಯಲ್ಲಿ ಹೆಚ್ಚು ಪ್ರಯೋಜನ ಪಡೆಯುತ್ತಿರುವ ಕೊಹ್ಲಿ: ಕಿರಣ್‌ ಮೋರೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ದೋನಿ ಉಪಸ್ಥಿತಿಯಲ್ಲಿ ಹೆಚ್ಚು ಪ್ರಯೋಜನ ಪಡೆಯುತ್ತಿರುವ ಕೊಹ್ಲಿ: ಕಿರಣ್‌ ಮೋರೆ

ನವದೆಹಲಿ: ‘ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ದೋನಿ ಅವರ ಉಪಸ್ಥಿತಿಯಲ್ಲಿ ನಾಯಕ ವಿರಾಟ್‌ ಕೊಹ್ಲಿ ಹೆಚ್ಚು ಪ್ರಯೋಜನ ಪಡೆಯುತ್ತಿದ್ದಾರೆ’ ಎಂದು ಭಾರತೀಯ ಹಿರಿಯ ಕ್ರಿಕೆಟಿಗ ಕಿರಣ್‌ ಮೋರೆ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ದೋನಿ ಒಬ್ಬ ಶ್ರೇಷ್ಠ ಆಟಗಾರ ಎಂಬುದರಲ್ಲಿ ಯಾವುದೆ ಅನುಮಾನವಿಲ್ಲ. ತಂಡದ ನಾಯಕ ಸೇರಿದಂತೆ ಸ್ಪಿನ್ನರ್‌ಗಳು ದೋನಿ ಅವರಿಂದ ಹೆಚ್ಚು ಪ್ರಯೋಜನ ಪಡೆಯುತ್ತಿದ್ದಾರೆ’ ಎಂದು ಹೇಳಿದ್ದಾರೆ.

‘ದಕ್ಷಿಣ ಆಫ್ರಿಕಾ ಸರಣಿಯಲ್ಲಿ ದೋನಿ ಹೆಚ್ಚು ರನ್‌ ಗಳಿಸಿದೆ ಇರಬಹುದು. ಆದರೆ, ಅವರು ತಂಡದಲ್ಲಿರುವುದರಿಂದ ಯಶಸ್ಸು ಗಳಿಸಲು ಸಾಧ್ಯವಾಗಿದೆ. ದೋನಿ ಬೌಲರ್‌ಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದು, ಅವರು ಯಾವುದೆ ಒತ್ತಡವಿಲ್ಲದೆ ಬೌಲಿಂಗ್‌ ಮಾಡುತ್ತಾರೆ’ ಎಂದಿದ್ದಾರೆ.

ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ವಿರಾಟ್‌ ಪಡೆ ಮೂರು ಪಂದ್ಯಗಳ ಟ್ವೆಂಟಿ–20 ಕ್ರಿಕೆಟ್‌ ಸರಣಿಯಲ್ಲಿ 1–0ರಲ್ಲಿ ಮುನ್ನಡೆ ಸಾಧಿಸಿದೆ.

ಎರಡನೇ ಟ್ವೆಂಟಿ–20 ಕ್ರಿಕೆಟ್‌ ಪಂದ್ಯ ಫೆ.21ರಂದು ನಡೆಯಲಿದೆ.

ಪ್ರತಿಕ್ರಿಯಿಸಿ (+)