ನವದೆಹಲಿ: ಕರಾವಳಿ ಜಿಲ್ಲೆಗಳ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆಯು ಕಳೆದ ನವೆಂಬರ್ 17ರಂದು ಅಂಗೀಕರಿಸಿದ್ದ ಪ್ರಾಣಿ ಹಿಂಸೆ ತಡೆ (ತಿದ್ದುಪಡಿ) ಮಸೂದೆ– 2017ಕ್ಕೆ ರಾಷ್ಟ್ರಪತಿಯವರ ಅಂಕಿತ ದೊರೆತಿದೆ.

ಫೆಬ್ರುವರಿ 10ರಂದು ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿಯವರು ಅಂಕಿತ ದೊರೆತಿದೆ. ಸೋಮವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರದ ಗೃಹ ಸಚಿವಾಲಯವು ಇದನ್ನು ಖಚಿತಪಡಿಸಿದೆ.

ಕಳೆದ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿದ್ದ ಈ ತಿದ್ದುಪಡಿ ಮಸೂದೆಯನ್ನು ರಾಷ್ಟ್ರಪತಿಯವರು ಹಿಂದಕ್ಕೆ ಕಳುಹಿಸಿದ್ದರಿಂದ ಕೆಲವು ಬದಲಾವಣೆಗಳೊಂದಿಗೆ ಮತ್ತೆ ಅಂಕಿತಕ್ಕೆ ಕಳುಹಿಸಲಾಗಿತ್ತು.

ಕೋಣಗಳನ್ನು ಓಡಿಸುವ ಕ್ರೀಡೆಯಾದ ಕಂಬಳ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಜನಪ್ರಿಯವಾಗಿರುವ ಹೋರಿ ಬೆದರಿಸುವ ಸ್ಪರ್ಧೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಸುಗ್ರೀವಾಜ್ಞೆಗೂ ರಾಷ್ಟ್ರಪತಿಯವರ ಅಂಕಿತ ದೊರತಿತ್ತು.

ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಸ್ವಯಂ ಸೇವಾ ಸಂಘಟನೆಯಾದ ಪೆಟಾ ಇಂಡಿಯಾ, ಕಂಬಳ ಕ್ರೀಡೆಯಲ್ಲಿ ಭಾಗವಹಿಸುವ ಕೋಣಗಳನ್ನು ಹಿಂಸಿಸುವುದರಿಂದ ಅವಕಾಶ ನೀಡಬಾರದು ಎಂದು ಕೋರಿತ್ತು.

ತಮಿಳುನಾಡಿನಲ್ಲಿ ಆಚರಣೆಯಲ್ಲಿರುವ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದರಿಂದ ಅಲ್ಲಿನ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಅವಕಾಶ ಕಲ್ಪಿಸಿತ್ತು. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿತ್ತು.

ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ದೊರೆತಿರುವುದರಿಂದ ಕಂಬಳ ಮತ್ತು ಹೋರಿ ಬೆದರಿಸುವ ಸ್ಪರ್ಧೆಗಳಿಗೆ ಎದುರಾಗಿದ್ದ ಆತಂಕ ದೂರವಾದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.