ನೂತನ ಆಸ್ಪತ್ರೆ ಶೀಘ್ರವೇ ಲೋಕಾರ್ಪಣೆ

7

ನೂತನ ಆಸ್ಪತ್ರೆ ಶೀಘ್ರವೇ ಲೋಕಾರ್ಪಣೆ

Published:
Updated:

ಮದ್ದೂರು: ‘₹ 5ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಆಸ್ಪತ್ರೆ ಕಟ್ಟಡವನ್ನು ಶೀಘ್ರದಲ್ಲಿಯೇ ಲೋಕಾರ್ಪಣೆಮಾಡಲಾಗುವುದು’ ಎಂದು ಶಾಸಕ ಡಿ.ಸಿ. ತಮ್ಮಣ್ಣ ಹೇಳಿದರು.

ಪಟ್ಟಣದ ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ಸೋಮವಾರ ಉದ್ಘಾಟಿಸಿದ ಅವರು, ‘ಹಳೆ ಕಟ್ಟಡದ ನವೀಕರಣಕ್ಕೆ ₹ 1.5 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕಾಂಪೌಂಡ್ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ’ ಎಂದರು.

‘ಬಹು ವರ್ಷಗಳ ಹಿಂದೆಯೇ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ತೆರೆಯವಂತೆ ಇಲ್ಲಿನ ಜನರ ಬೇಡಿಕೆ ಇಟ್ಟಿದ್ದರು. ರೋಗಿಗಳಿಗೆ ಅನುಕೂಲವಾಗುವಂತೆ ಸುಸಜ್ಜಿತವಾದ 2 ಹಾಸಿಗೆಯ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಲಾಗದೆ. ಮೂತ್ರಪಿಂಡ ಕಾಯಿಲೆಗೆ ತುತ್ತಾದ ರೋಗಿಗಳು ಈ ಕೇಂದ್ರದ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶಶಿಕಲಾ, ಡಾ.ಅಶ್ವತ್ಥ, ಡಾ. ಬೆಟ್ಟಸ್ವಾಮಿ, ಡಾ.ಭವಾನಿಶಂಕರ್, ಡಾ.ಮೋಹನ್ ಮುಖಂಡರಾದ ಕೆ.ದಾಸೇಗೌಡ, ಗುಂಡ ಮಹೇಶ್ ಇನ್ನಿತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry