ಮಂಗಳವಾರ, ಡಿಸೆಂಬರ್ 10, 2019
20 °C

ಬಿಜೆಪಿ ಕಾರ್ಯಕರ್ತರು ಚುನಾವಣೆಗೆ ಸನ್ನದ್ಧ: ಮುರಳಿಧರರಾವ್

Published:
Updated:
ಬಿಜೆಪಿ ಕಾರ್ಯಕರ್ತರು ಚುನಾವಣೆಗೆ ಸನ್ನದ್ಧ: ಮುರಳಿಧರರಾವ್

ಮಂಗಳೂರು: ನಮ್ಮ ಕಾರ್ಯಕರ್ತರು ಈಗಾಗಲೇ ಚುನಾವಣೆಗೆ ಸಜ್ಜಾಗಿದ್ದಾರೆ. ಸಿದ್ದರಾಮಯ್ಯ ಅವರಿಗೂ ಇದು ಗೊತ್ತಾಗಲಿದೆ ಎಂದು ‌ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರರಾವ್ ಹೇಳಿದರು

ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಕರ್ತರ ಮೂಲಕ ಚುನಾವಣೆಯಲ್ಲಿ ಜಯಗಳಿಸಲಿದೆ. ಆರ್‌ಎಸ್ಎಸ್, ಬಿಜೆಪಿ ಕಾರ್ಯಕರ್ತರನ್ನು ನೋಡಿ ಕಲಿತುಕೊಳ್ಳುವಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿಗಳೇ ಹೇಳಿದ್ದಾರೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸಿರಿಯಲ್ ನಡೆಯುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸಂಸ್ಕೃತಿ ಅನಾವರಣ ಆಗುತ್ತಿದೆ.‌ ಅಧಿಕಾರದ ಅಹಂಕಾರದಲ್ಲಿ ಕಾಂಗ್ರೆಸಿಗರು ಅತ್ಯಾಚಾರ, ಕೊಲೆ, ಅನಾಚಾರದಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ಕರ್ನಾಟಕದ ವಿಕಾಸದ ಜೋಡಿ- ಯಡಿಯೂರಪ್ಪ ಮೋದಿ. ಈ ಬಾರಿ ಬಿಜೆಪಿ ಗೆಲ್ಲಿಸಿ ಎಂದು ಪ್ರಧಾನಿ ಹೇಳಿದ್ದಾರೆ ಎಂದರು.

ಪ್ರತಿಕ್ರಿಯಿಸಿ (+)