ಭಾನುವಾರ, ಡಿಸೆಂಬರ್ 8, 2019
24 °C

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಶತಸಿದ್ಧ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

Published:
Updated:
ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಶತಸಿದ್ಧ: ಬಿ.ಎಸ್. ಯಡಿಯೂರಪ್ಪ ವಿಶ್ವಾಸ

ಮಂಗಳೂರು: ಪರಿವರ್ತನಾ ಯಾತ್ರೆಯ ಮೂಲಕ‌ ರಾಜ್ಯದ‌ ಉದ್ದಗಲಕ್ಕೆ ಪ್ರವಾಸ ಮಾಡಿದ್ದೇನೆ. ಆಯಾ ಭಾಗದ ಜ್ವಲಂತ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಜನರ ಆಶಯಗಳನ್ನು‌ ಆಲಿಸಿದ್ದೇನೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬಂಟ್ವಾಳದಲ್ಲಿ‌ ನವಶಕ್ತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ವಿಧಾನಸಭಾ ಕ್ಷೇತ್ರದ ಬೂತ್ ಗಳನ್ನು ಬಲಪಡಿಸಬೇಕು. ಬೂತ್ ಮಟ್ಟದಲ್ಲಿ ಶೇ 60ರಷ್ಟು ಮತ ಪಡೆಯುವಲ್ಲಿ ಯಶಸ್ವಿಯಾಗಬೇಕು.‌‌ ಕಾಂಗ್ರೆಸ್ ನವರು‌ ಎಷ್ಟೇ ಪ್ರಬಲರಾಗಿದ್ದರೂ ತಲೆ ಕೆಡಿಸಿಕೊಳ್ಳಬೇಡಿ. ಬೂತ್ ಗಳನ್ನು ಬಲಪಡಿಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಕರ್ನಾಟಕ‌‌ದಲ್ಲಿ ಮಾತ್ರ ಅಧಿಕಾರದಲ್ಲಿದೆ.‌ ಮೂರುವರೆ ವರ್ಷದಲ್ಲಿ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ವಿಶೇಷ ಪರಿಶ್ರಮ ಹಾಕಿ ಕೆಲಸ‌ ಮಾಡಿದರೆ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ತಿಳಿಸಿದರು.

ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಬೂತ್ ಮಟ್ಟದ ಕಾರ್ಯಕರ್ತರ ಶ್ರಮ ಅಪಾರವಾಗಿದೆ ಎಂದರು.

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ರಾಂತಿ‌ ಪಡೆಯದೇ ಕೆಲಸ ಮಾಡುತ್ತಿದ್ದಾರೆ. ಅವರ ಬೆಂಬಲಿಗರಾದ ನಾವು ಯಾವ ರೀತಿ ಕೆಲಸ‌ ಮಾಡಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯ ಪ್ರತಿಯೊಂದು ಪುಟದ ಜವಾಬ್ದಾರಿಯನ್ನು ಒಬ್ಬೊಬ್ಬ ಬೂತ್ ಪದಾಧಿಕಾರಿಗಳು ವಹಿಸಿಕೊಳ್ಳಬೇಕು. ಕೇಂದ್ರ ಸರ್ಕಾರದ ಸಾಧನೆ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)