ಶುಕ್ರವಾರ, ಡಿಸೆಂಬರ್ 6, 2019
24 °C

ಸಹಪಾಠಿಯಿಂದಲೇ ವಿದ್ಯಾರ್ಥಿನಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಹಪಾಠಿಯಿಂದಲೇ ವಿದ್ಯಾರ್ಥಿನಿಯ ಕೊಲೆ

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯ ಸುಳ್ಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಹಪಾಠಿಯೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ.

ಅಕ್ಷತಾ ಮೃತ ವಿದ್ಯಾರ್ಥಿನಿ. ಕಾರ್ತಿಕ್ ಕೊಲೆ‌ ಮಾಡಿದ ಆರೋಪಿ. ಮಂಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿ ವಾಪಸು ಹೋಗುವಾಗ ಕೊಲೆ ಮಾಡಿದ್ದಾನೆ. 

(ಕಾರ್ತಿಕ್‌)

ಅಕ್ಷತಾ ಕುತ್ತಿಗೆಗೆ ಆಕೆಯ ಸಹಪಾಠಿ ಕಾರ್ತಿಕ್ ಚೂರಿಯಿಂದ ಇರಿದಿದ್ದಾನೆ. ಆಕೆ ಮೃತಪಟ್ಟಿದ್ದಾಳೆ. ಬಳಿಕ ತನ್ನ ಕೈ ಮಣಿಕಟ್ಟನ್ನು ಚೂರಿಯಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ ವಿದ್ಯಾರ್ಥಿನಿ ಬಿಎಸ್ಸಿ ಪದವಿ ಓದುತ್ತಿದ್ದರು. 

ಆರೋಪಿಯು ಅಕ್ಷತಾ ಕುತ್ತಿಗೆಗೆ ಆರು ಬಾರಿ ಚೂರಿಯಿಂದ ಇರಿದಿದ್ದಾನೆ. ಇಬ್ಬರೂ ಸುಳ್ಯದ ನೆಹರೂ ಸ್ಮಾರಕ ಕಾಲೇಜಿನ ವಿದ್ಯಾರ್ಥಿನಿಗಳು. 

ಆರೋಪಿಯನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೇಮ ವೈಫಲ್ಯವೇ ಘಟನೆಗೆ ಕಾರಣವಾಗಿರಬಹುದು ಎಂಬುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ಅಕ್ಷತಾ ಕೇರಳದ ಗಡಿ ಭಾಗದವರು. ಕಾರ್ತಿಕ್ ಸುಳ್ಯ ತಾಲ್ಲೂಕಿನ ನಾರ್ನಕಜೆ ನಿವಾಸಿ. ಪ್ರೇಮ ನಿವೇದನೆ ಮಾಡಿಕೊಂಡಾಗ ಒಪ್ಪಲಿಲ್ಲ ಎಂಬ ಕಾರಣಕ್ಕೆ ಕೃತ್ಯ ಎಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರತಿಕ್ರಿಯಿಸಿ (+)