ಮಂಗಳವಾರ, ಡಿಸೆಂಬರ್ 10, 2019
20 °C

ಬ್ರಾಹ್ಮಣ, ವೈಶ್ಯರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ: ಪ್ರಸನ್ನಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಾಹ್ಮಣ, ವೈಶ್ಯರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ: ಪ್ರಸನ್ನಕುಮಾರ್

ಬೆಂಗಳೂರು: ಬ್ರಾಹ್ಮಣ ಮತ್ತು ಆರ್ಯವೈಶ್ಯ ಸಮುದಾಯದವರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಬಿ. ಪ್ರಸನ್ನಕುಮಾರ್ ವಿಧಾನಸಭೆಯಲ್ಲಿ ಮಂಗಳವಾರ ಮನವಿ ಮಾಡಿದರು.

ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕು ಮುಕ್ಕಾಲು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಸಮುದಾಯಗಳಿಗೂ  ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಬ್ರಾಹ್ಮಣ ಮತ್ತು ವೈಶ್ಯ ಸಮುದಾಯದವರಲ್ಲಿ ಸಾಕಷ್ಟು ಸಂಖ್ಯೆಯ ಬಡವರಿದ್ದಾರೆ. ಅವರಿಗೆ ಸ್ವಯಂ ಉದ್ಯೋಗ ಹಾಗೂ ಸಾಲದ ರೂಪದಲ್ಲಿ ಆರ್ಥಿಕ ನೆರವು ನೀಡಲು ನಿಗಮ ಸ್ಥಾಪಿಸಬೇಕು ಎಂದು ಕೋರಿದರು.

ಬೆಳಗ್ಗೆ ಮೂರುವರೆ ನಾಲ್ಕುಗಂಟೆಗೆ ಎದ್ದು ಮನೆ ಮನೆಗೆ ದಿನಪತ್ರಿಕೆಗಳನ್ನು ತಲುಪಿಸುವವರ ಬಗ್ಗೆ ಇಲ್ಲಿಯವರೆಗಿನ ಯಾವ ಸರ್ಕಾರವೂ ಗಮನ ಹರಿಸಿರಲಿಲ್ಲ. ಇದೇ ಮೊದಲ ಬಾರಿಗೆ ಪತ್ರಿಕೆ ಹಂಚುವವರ ಕ್ಷೇಮಾಭಿವೃದ್ಧಿಗೆ ₹2 ಕೋಟಿ ಅನುದಾನ ನೀಡಿದ ಸಿದ್ದರಾಮಯ್ಯ, ಅಲಕ್ಷಿತ ಸಮುದಾಯದ ನೋವಿಗೆ ಧ್ವನಿಯಾಗಿದ್ದಾರೆ ಎಂದು ಹೇಳಿದರು.

ಹೃದ್ರೋಗಿಗಳಿಗೆ ಚಿಕಿತ್ಸೆ ನೀಡಲು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ಸೌಲಭ್ಯ ಇರಲಿಲ್ಲ. ಮಂಗಳೂರು ಅಥವಾ ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯ ಇತ್ತು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ಆರಂಭಿಸಲು ₹7.6 ಕೋಟಿ ಅನುದಾನ ನೀಡಿದ್ದಾರೆ ಎಂದೂ ಅವರು ವಿವರಿಸಿದರು.

ಪ್ರತಿಕ್ರಿಯಿಸಿ (+)