ರೊಟೊಮ್ಯಾಕ್‌ 14 ಬ್ಯಾಂಕ್ ಖಾತೆ ಮುಟ್ಟುಗೋಲು

7

ರೊಟೊಮ್ಯಾಕ್‌ 14 ಬ್ಯಾಂಕ್ ಖಾತೆ ಮುಟ್ಟುಗೋಲು

Published:
Updated:

ನವದೆಹಲಿ: ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾನ್ಪುರ ಮೂಲದ ರೊಟೊಮ್ಯಾಕ್‌ ಪೆನ್‌ ತಯಾರಿಕಾ ಕಂಪನಿಯ ತನಿಖೆ ನಡೆಸಿದ್ದಾರೆ.

ತೆರಿಗೆ ವಂಚನೆ ಸಂಬಂಧ ಕಂಪನಿಯ 14 ಬ್ಯಾಂಕ್‌ ಖಾತೆಗಳನ್ನು ಮಂಗಳವಾರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಿಕ್ರಮ್‌ ಕೊಠಾರಿ ಒಡೆತನದ ಕಂಪನಿ ₹85 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ತೆರಿಗೆ ಇಲಾಖೆ ಹೇಳಿದೆ.

ಏಳು ಬ್ಯಾಂಕ್‌ಗಳಿಗೆ ₹3,695 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಕಚೇರಿಗಳಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry