ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಭಾರತ ಬ್ಯಾಡ್ಮಿಂಟನ್‌ ತಂಡ: ಸಿಂಧು, ಸೈನಾ ಭರವಸೆ

Last Updated 20 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರುವ ಸೈನಾ ನೆಹ್ವಾಲ್‌ ಹಾಗೂ ಪಿ.ವಿ ಸಿಂಧು ಮುಂಬರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸಿಂಧು ಮತ್ತು ಸೈನಾ ಪದಕ ತಂದುಕೊಡುವ ವಿಶ್ವಾಸ ಹೊಂದಿದ್ದಾರೆ.

ಏಪ್ರಿಲ್‌ 4ರಿಂದ 15ರವರೆಗೆ ಗೋಲ್ಡ್‌ಕೋಸ್ಟ್‌ನಲ್ಲಿ ನಡೆಯುವ ಕೂಟಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಕಿದಂಬಿ ಶ್ರೀಕಾಂತ್ ಪ್ರಮುಖ ಭರವಸೆ ಎನಿಸಿದ್ದಾರೆ. ಎಚ್‌.ಎಸ್‌. ಪ್ರಣಯ್ ಕೂಡ ಕಣದಲ್ಲಿದ್ದಾರೆ.

ಪುರುಷರ ಡಬಲ್ಸ್ ವಿಭಾಗದಲ್ಲಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್‌ ಮಿಶ್ರ ಡಬಲ್ಸ್‌ನಲ್ಲಿ ಪ್ರಣವ್ ಜೆರಿ ಚೋಪ್ರಾ ಮತ್ತು ಸಿಕ್ಕಿ ರೆಡ್ಡಿ ಆಡಲಿದ್ದಾರೆ. ಮಹಿಳೆಯರ ಡಬಲ್ಸ್‌ನಲ್ಲಿ ಸಿಕ್ಕಿ ರೆಡ್ಡಿ ಮತ್ತು ಅಶ್ವಿನಿ ಪೊನ್ನಪ್ಪ ಪದಕದ ಭರವಸೆ ಹೊಂದಿದ್ದಾರೆ.

‘ಈ ವರ್ಷ ನಾವು ಹೆಚ್ಚು ಪದಕ ಗೆಲ್ಲುವ ವಿಶ್ವಾಸ ಹೊಂದಿದ್ದೇವೆ’ ಎಂದು ಭಾರತ ಬ್ಯಾಡ್ಮಿಂಟನ್‌ ಸಂಸ್ಥೆ (ಬಿಎಐ) ಪ್ರಧಾನ ಕಾರ್ಯದರ್ಶಿ ಅನೂಪ್‌ ನಾರಂಗ್ ಹೇಳಿದ್ದಾರೆ. ಭಾರತ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಪಾಕಿಸ್ತಾನ, ಶ್ರೀಲಂಕಾ, ಸ್ಕಾಟ್ಲೆಂಡ್‌ ತಂಡಗಳು ಇದೇ ಗುಂಪಿನಲ್ಲಿವೆ.

ತಂಡ ಇಂತಿದೆ: ಪುರುಷರು: ಕಿದಂಬಿ ಶ್ರೀಕಾಂತ್‌, ಎಚ್.ಎಸ್‌.ಪ್ರಣಯ್‌, ಚಿರಾಗ್ ಶೆಟ್ಟಿ, ಸಾತ್ವಿಕ್ ಸಾಯಿರಾಜ್‌, ಪ್ರಣವ್ ಜೆರಿ ಚೋಪ್ರಾ. ಮಹಿಳೆಯರು: ಪಿ.ವಿ ಸಿಂಧು, ಸೈನಾ ನೆಹ್ವಾಲ್‌, ಅಶ್ವಿನಿ ಪೊನ್ನಪ್ಪ, ಸಿಕ್ಕಿ ರೆಡ್ಡಿ, ರುತ್ವಿಕಾ ಶಿವಾನಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT