ನವದೆಹಲಿ (ಪಿಟಿಐ): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಸೋಮವಾರ ರಾತ್ರಿ ಆಮ್ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಆರೋಪಿಸಿದ್ದಾರೆ.

ಈ ಬಗ್ಗೆ ಸ್ವತಃ ಅಂಶು ಪ್ರಕಾಶ್ ಅವರು ಮಂಗಳವಾರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ.

ಎಎಪಿ ಶಾಸಕರಾದ ಅಜಯ್ ದತ್ ಮತ್ತು ಪ್ರಕಾಶ್ ಜರ್ವಾಲ್ ವಿರುದ್ಧ ಪೊಲೀಸರಿಗೂ ದೂರು ನೀಡಿದ್ದಾರೆ.

ಆದರೆ, ಈ ಆರೋಪವನ್ನು ಮುಖ್ಯಮಂತ್ರಿ ಕಚೇರಿ ನಿರಾಕರಿಸಿದೆ. ‘ಪಕ್ಷದ ಶಾಸಕರು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಮುಖ್ಯ ಕಾರ್ಯದರ್ಶಿಯೇ ಶಾಸಕರ ಜತೆ ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಎಎಪಿ ಹೇಳಿದೆ.

ದೆಹಲಿ ನಾಗರಿಕ ಸೇವಾ (ಡಿಎಎಸ್) ಅಧಿಕಾರಿಗಳು ಮತ್ತು ಎಎಪಿ ಶಾಸಕರ ನಡುವಿನ ಜಟಾಪಟಿಯಿಂದ ಸಚಿವಾಲಯ ರಣರಂಗವಾಗಿತ್ತು.

ವರದಿ ಕೇಳಿದ ರಾಜನಾಥ ಸಿಂಗ್: ಈ ಘಟನೆಯ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಲೆಫ್ಟಿನೆಂಟ್ ಅನಿಲ್ ಬೈಜಾಲ್ ಅವರಿಂದ ವರದಿ ಕೇಳಿದ್ದಾರೆ.

ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರು ಸಚಿವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಮಾಹಿತಿ ನೀಡಿದ ನಂತರ ಗೃಹ ಸಚಿವಾಲಯ ವರದಿ ಕೇಳಿದೆ.

ಯಾವುದೇ ತನಿಖೆ ಇಲ್ಲದೆ ಕೇಂದ್ರ ಗೃಹ ಸಚಿವರು ಎಎಪಿ ತಪ್ಪುಗಳನ್ನು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಎಎಪಿ ಟೀಕಿಸಿದೆ.

ಪ್ರತಿಭಟನಾ ನಿರತ ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಎಎಪಿ ವಿರುದ್ಧ ಘೋಷಣೆ ಕೂಗಿದರು. ಪರಿಸರ ಖಾತೆ ಸಚಿವ ಇಮ್ರಾನ್ ಹುಸೇನ್ ಅವರಿಗೆ ಮುತ್ತಿಗೆ ಹಾಕಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.

ಪ್ರತಿಭಟನಾನಿರತರು ತಮ್ಮ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಚಿವ ಇಮ್ರಾನ್ ಹುಸೇನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಜೆ ರಾಜಘಾಟ್‌ನಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಿದ ಅಧಿಕಾರಿಗಳು, ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಇದಕ್ಕೆ ಧ್ವನಿಗೂಡಿಸಿವೆ.

ಮುಖ್ಯ ಕಾರ್ಯದರ್ಶಿ ಆರೋಪ

ಜಾಹೀರಾತು ಕುರಿತು ಚರ್ಚಿಸಲು ಸೋಮವಾರ ರಾತ್ರಿ ತಮ್ಮನ್ನು ಕರೆಸಿಕೊಂಡ ಮುಖ್ಯಮಂತ್ರಿ, ಕೊಠಡಿಯೊಂದರಲ್ಲಿ ಕೂಡಿಹಾಕಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿದರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೆಲಸ ಮಾಡುವುದಾಗಿ ಹೇಳಿದಾಗ ಸಿಟ್ಟಿಗೆದ್ದ 11 ಶಾಸಕರು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಕೆಲವು ಶಾಸಕರು ತಮ್ಮನ್ನು ಥಳಿಸಿದರು.

ಎಎಪಿ ಪ್ರತ್ಯಾರೋಪ

ಜನರಿಗೆ ಚಿಕಿತ್ಸೆ, ಔಷಧಿ, ನೀರು ಸೇರಿದಂತೆ ಇನ್ನಿತರ ಮೂಲಸೌಕರ್ಯ ಸಿಗುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಎಂದು ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದರು.

‘ಲೆಫ್ಟಿನೆಂಟ್ ಗವರ್ನರ್‌ಗೆ ಮಾತ್ರ ನನ್ನನ್ನು ಪ್ರಶ್ನಿಸುವ ಅಧಿಕಾರವಿದೆ. ಮುಖ್ಯಮಂತ್ರಿ ಮತ್ತು ಶಾಸಕರಿಗೆ ಈ ಅಧಿಕಾರ ಇಲ್ಲ’ ಎಂದು ಅವರು ಉಡಾಫೆಯಿಂದ ಉತ್ತರಿಸಿದರು. ಜತೆಗೆ ಕೆಲವು ಶಾಸಕರನ್ನು ಜಾತಿ ಹೆಸರಿನಿಂದ ನಿಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.