ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಜಾಮೀನು ನಿರಾಕರಣೆ

7

ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಜಾಮೀನು ನಿರಾಕರಣೆ

Published:
Updated:

ಬೆಂಗಳೂರು: ಹದಿಮೂರು ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ 40 ವರ್ಷದ ಕ್ರಿಕೆಟ್‌ ಕೋಚ್‌ಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಈ ಸಂಬಂಧ ಆರೋಪಿ ನಜೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ತನಿಖೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಜಾಮೀನು ನಿರಾಕರಿಸಿತು.

‘ಕ್ರಿಕೆಟ್‌ ತರಬೇತಿ ನೆಪದಲ್ಲಿ ನಜೀರ್ ಬಾಲಕನ ಜತೆ ಸಲುಗೆ ಬೆಳೆಸಿಕೊಂಡಿದ್ದ. ಕಳೆದ ತಿಂಗಳು 27ರಂದು ಸಂಜೆ ಬಾಲಕನನ್ನು ಜಿಕೆವಿಕೆ (ಗಾಂಧಿ ಕೃಷಿ ವಿಜ್ಞಾನ ಕೇಂದ್ರ) ಕ್ಯಾಂಪಸ್‌ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದ. ಲೈಂಗಿಕ ಬಯಕೆ ಈಡೇರಿಸಿದರೆ ನಿನಗೆ ಐಪಿಎಲ್‌ ಮ್ಯಾಚ್‌ನಲ್ಲಿ ಆಡಲು ಅವಕಾಶ ನೀಡುತ್ತೇನೆ ಎಂದು ಪುಸಲಾಯಿಸಿದ್ದ’ ಎಂಬ ಆರೋಪವನ್ನು ಎದುರಿಸುತ್ತಿದ್ದಾನೆ’.

28ರಂದು ಬಾಲಕ ತನ್ನ ತಾಯಿಗೆ ಈ ಕುರಿತು ವಿವರಿಸಿದ್ದ. ಈ ಕುರಿತು ಯಲಹಂಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರು ದಾಖಲಾದ ಅರ್ಧ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಆರೋಪಿಯ ಜಾಮೀನು ಅರ್ಜಿಯನ್ನು ಅಧೀನ ನ್ಯಾಯಾಲಯ ತಿರಸ್ಕರಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry