4

ಉಡುಪಿ ಶ್ರೀಕೃಷ್ಣ ಮಠಕ್ಕೆ ಅಮಿತ್ ಶಾ ಭೇಟಿ

Published:
Updated:
ಉಡುಪಿ ಶ್ರೀಕೃಷ್ಣ ಮಠಕ್ಕೆ ಅಮಿತ್ ಶಾ ಭೇಟಿ

ಉಡುಪಿ: ರಾಜ್ಯ ಪ್ರವಾಸದ ಅಂಗವಾಗಿ ಕರಾವಳಿ ಜಿಲ್ಲೆಗಳಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರು ಬುಧವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ಅವರು ಕನಕನ ಕಿಂಡಿಯ ಮೂಲಕ ದೇವರ ದರ್ಶನ ಪಡೆದರು. ಈ ವೇಳೆ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿಗಳು ಅಮಿತ್​ ಶಾ ಅವರನ್ನು ಗೌರವಿಸಿದರು. ಇದೇ ವೇಳೆ ತೆಗೆದ ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಪ್ರಮುಖರೊಂದಿಗೆ ಸಂವಾದ ನಡೆಸಿದರು.

ಬಳಿಕ ಶಾ ಉತ್ತರ ಕನ್ನಡ ಜಿಲ್ಲೆಗೆ ತೆರಳುವರು. ಹೊನ್ನಾವರದಲ್ಲಿ ಪರೇಶ್‌ ಮೇಸ್ತ ಮನೆಗೆ ತೆರಳುವ ನಿರೀಕ್ಷೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry